ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cinema News: ಸೆಟ್ಟೇರಿದ ‘ಮೆಜೆಸ್ಟಿಕ್-2’

Published 2 ಏಪ್ರಿಲ್ 2024, 18:35 IST
Last Updated 2 ಏಪ್ರಿಲ್ 2024, 18:35 IST
ಅಕ್ಷರ ಗಾತ್ರ

ಬೆಂಗಳೂರಿನ ಹೃದಯಭಾಗದಂತಿರುವ ‘ಮೆಜೆಸ್ಟಿಕ್’ ಅನ್ನೇ ಚಿತ್ರ ಶೀರ್ಷಿಕೆಯಾಗಿಸಿಕೊಂಡು ನಟ ದರ್ಶನ್‌ ಮಾಡಿದ್ದ ಚಿತ್ರ ಸೂಪರ್‌ ಹಿಟ್‌ ಆಗಿತ್ತು. ‘ಮೆಜೆಸ್ಟಿಕ್–2’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಹಿರಿಯ ನಿರ್ಮಾಪಕ ಹಾಗೂ ವಿತರಕ ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ನಾಯಕನಾಗಿ  ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅಂದು ‘ಮೆಜೆಸ್ಟಿಕ್’ಗೆ ಕಥೆ ಬರೆದಿದ್ದ ರಾಮು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

‘ಮೆಜೆಸ್ಟಿಕ್ ಕುರಿತು ಇತಿಹಾಸವನ್ನೇ ಬರೆಯಬಹುದು. ಹಗಲಲ್ಲಿ ನಡೆಯುವ ಚಟುವಟಿಕೆಗಳದ್ದು ಒಂದು ಕಥೆಯಾದರೆ, ರಾತ್ರಿ ನಡೆಯುವ ಚಟುವಟಿಕೆಗಳದ್ದು ಮತ್ತೊಂದು ಕಥೆ. ನಾನು ಬೆಂಗಳೂರಿಗೆ ಬಂದಾಗ ಮೆಜೆಸ್ಟಿಕ್‌ನಲ್ಲಿ ಏನೇನೆಲ್ಲ ಚಟುವಟಿಕೆಗಳು ನಡೆಯುತ್ತಿದ್ದವು ಎಂಬುದನ್ನು ಕಣ್ಣಾರೆ ನೋಡಿದ್ದೆ. ಆ ಘಟನೆಗಳನ್ನು ಇಟ್ಟುಕೊಂಡು ಮೆಜೆಸ್ಟಿಕ್ ಕಥೆ ಬರೆದಿದ್ದೆ. ಈಗಿನ ಕಾಲದಲ್ಲಿ ಅಲ್ಲಿ ರೌಡಿಸಂ ಹೇಗೆ ನಡೀತಿದೆ ಎಂದು ಈ ಚಿತ್ರದಲ್ಲಿ ಹೇಳುತ್ತಿದ್ದೇನೆ’ ಎಂದರು ನಿರ್ದೇಶಕರು.

ಅಮ್ಮಾ ಎಂಟರ್‌ಪ್ರೈಸಸ್ ಮೂಲಕ ಚಿತ್ರದುರ್ಗದ ಟಿ.ಆನಂದಪ್ಪ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ನಟಿ ಶ್ರುತಿ ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂಹಿತಾ ವಿನ್ಯಾ ನಾಯಕಿ. ಈ ಚಿತ್ರಕ್ಕೆ ವಿನು ಮನಸು ಸಂಗೀತ ನಿರ್ದೇಶನ, ವೀನಸ್ ಮೂರ್ತಿ ಛಾಯಾಚಿತ್ರಗ್ರಹಣವಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT