ನಾಗಶೇಖರ್ ನಿರ್ದೆಶನದ ‘ಸಂಜು ವೆಡ್ಸ್ ಗೀತಾ-2’ ಚಿತ್ರೀಕರಣ ಭರದಿಂದ ಸಾಗಿದೆ. ಇತ್ತೀಚೆಗಷ್ಟೇ ನಗರದ ಕಂಠೀರವ ಸ್ಟುಡಿಯೋದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಮುಂಚಿನ ದೃಶ್ಯದ ಚಿತ್ರೀಕರಣ ನಡೆಯಿತು.

ಚಿತ್ರತಂಡ ಈ ಹಿಂದೆ ನೀಡಿದ್ದ ಮಾಹಿತಿಯಂತೆ ಏಪ್ರಿಲ್ನಲ್ಲಿಯೇ ತೆರೆಗೆ ಬರಬೇಕಿತ್ತು. ಆದರೆ ಚಿತ್ರೀಕರಣ ವಿಳಂಬವಾಗಿ ದಸರಾ ವೇಳೆಗೆ ಚಿತ್ರವನ್ನು ತೆರೆಗೆ ತರುವ ಆಲೋಚನೆಯಲ್ಲಿ ತಂಡಕ್ಕೆ ಇ ದೆ.

‘ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದೆ. ಇದು ಚಿತ್ರದ ಕ್ಲೈಮ್ಯಾಕ್ಸ್ ಮುಂಚಿನ ದೃಶ್ಯ. ಇದರ ನಂತರ ನೆದರ್ಲೆಂಡ್ಸ್ನಲ್ಲಿ ಚಿತ್ರೀಕರಣ ಮುಂದುವರಿಯುತ್ತದೆ. ಈಗಾಗಲೇ ಸ್ವಿಟ್ಜರ್ಲೆಂಡ್ನಲ್ಲಿ 15 ದಿನ ಹನ್ನೊಂದು ಸ್ಥಳಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಶೂಟಿಂಗ್ ಜೊತೆಗೆ ಎಡಿಟಿಂಗ್ ಸೇರಿದಂತೆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಹುತೇಕ ಮುಗಿದಿವೆ. ದಸರಾ ವೇಳೆಗೆ ಚಿತ್ರವನ್ನು ತೆರೆಗೆ ತರಲು ಪ್ರಯತ್ನ ಮಾಡುತ್ತಿದ್ದೇವೆ’ ಎಂದರು ನಿರ್ದೆಶಕರು.

ಶ್ರೀನಗರ ಕಿಟ್ಟಿಗೆ ರಚಿತಾ ರಾಮ್ ಜೋಡಿಯಾಗಿದ್ದಾರೆ. ಪವಿತರ ಇಂಟರ್ ನ್ಯಾಷನಲ್ ಮೂವಿಮೇಕರ್ಸ್ ಅಡಿಯಲ್ಲಿ ನಿರ್ಮಾಪಕ ಛಲವಾದಿ ಕುಮಾರ್ ಬಂಡವಾಳ ಹೂಡಿದ್ದಾರೆ. ಶ್ರೀಧರ ವಿ.ಸಂಭ್ರಮ ಸಂಗೀತವಿದೆ.

ರಾಗಿಣಿ ದ್ವಿವೇದಿ, ಚೇತನ್ಚಂದ್ರ, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮೊದಲಾದವರು ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.