ಭಾನುವಾರ, ಜೂನ್ 26, 2022
21 °C

ಚಿತ್ರ ನಿರ್ಮಾಪಕ ಬೋನಿ ಕಪೂರ್ ಕ್ರೆಡಿಟ್ ಕಾರ್ಡ್ ದುರ್ಬಳಕೆ: ₹3.82 ಲಕ್ಷ ವಂಚನೆ 

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ಚಿತ್ರ ನಿರ್ಮಾಪಕ ಬೋನಿ ಕಪೂರ್ ಅವರ ಕ್ರೆಡಿಟ್ ಕಾರ್ಡ್ ಅನ್ನು ಅಪರಿಚಿತ ವ್ಯಕ್ತಿಯೊಬ್ಬ ದುರ್ಬಳಕೆ ಮಾಡಿಕೊಂಡಿದ್ದು, ₹3.82 ಲಕ್ಷ ವಂಚಿಸಿದ್ದಾನೆ. 

ಇತ್ತೀಚೆಗೆ ಬೋನಿ ಕಪೂರ್‌ ತಮ್ಮ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಆಗಿರುವ ಬಗ್ಗೆ ಬ್ಯಾಂಕ್‌ನಲ್ಲಿ ವಿಚಾರಿಸಿದ್ದರು. ಆಗ ಅಪರಿಚಿತ ವ್ಯಕ್ತಿಯೊಬ್ಬರು ನಕಲಿ ಕ್ರೆಡಿಟ್ ಕಾರ್ಡ್ ಬಳಸಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಕಪೂರ್ ದೂರು ಸಲ್ಲಿಸಿದ್ದಾರೆ. 

'ನನ್ನ ಕ್ರೆಡಿಟ್ ಕಾರ್ಡ್ ವಿವರಗಳನ್ನು ಯಾರೂ ಕೇಳಿರಲಿಲ್ಲ. ಈ ಬಗ್ಗೆ ಯಾವುದೇ ಫೋನ್ ಕರೆ ಸ್ವೀಕರಿಸಿರಲಿಲ್ಲ’ ಎಂದು ಕಪೂರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಕಪೂರ್ ಅವರು ಈ ಹಿಂದೆ ಕ್ರೆಡಿಟ್‌ ಕಾರ್ಡ್ ಬಳಸುವಾಗ ಅಪರಿಚಿತರೊಬ್ಬರು ಡೇಟಾ ಕದ್ದಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ.

ಕಪೂರ್ ಅವರ ಕ್ರೆಡಿಟ್‌ ಕಾರ್ಡ್‌ನಿಂದ ಗುರುಗ್ರಾಮದ ಕಂಪನಿಯೊಂದರ ಖಾತೆಗೆ ಹಣ ಜಮೆ ಆಗಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನಲ್ಲಿ ಏನಿದೆ?
ಫೆಬುವರಿ 9ರಂದು ಅಪರಿಚಿತರೊಬ್ಬರು ನಕಲಿ ಕ್ರೆಡಿಟ್ ಕಾರ್ಡ್‌ ಬಳಸಿ ನನ್ನ ಖಾತೆಯಿಂದ ಐದು ಬಾರಿ ಆನ್‍ಲೈನ್ ವಹಿವಾಟು ನಡೆಸಿದ್ದಾರೆ. ನಂತರ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಕಪೂರ್ ಪೊಲೀಸರಿಗೆ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು