ಗುರುವಾರ , ಅಕ್ಟೋಬರ್ 17, 2019
24 °C

ಈ ವಾರ ತೆರೆಗೆ ‘ಅಧ್ಯಕ್ಷ ಇನ್ ಅಮೆರಿಕಾ’

Published:
Updated:

ಅಧ್ಯಕ್ಷ ಇನ್ ಅಮೆರಿಕಾ
ಪೀಪಲ್‌ ಮೀಡಿಯಾ ಫ್ಯಾಕ್ಟರಿ ಲಾಂಛನದಡಿ ವಿಶ್ವಪ್ರಸಾದ್ ಟಿ.ಜಿ. ನಿರ್ಮಿಸಿರುವ ‘ಅಧ್ಯಕ್ಷ ಇನ್ ಅಮೆರಿಕಾ’ ಚಿತ್ರ ಬಿಡುಗಡೆಯಾಗುತ್ತಿದೆ. ವಿವೇಕ್ ಕುಚಿಬೊಟ್ಲ ಇದರ ಸಹ ನಿರ್ಮಾಪಕ. 

ಯೋಗಾನಂದ್ ಮುದ್ದಾನ್ ಈ ಚಿತ್ರ ನಿರ್ದೇಶನದ ಜೊತೆಗೆ ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ನಾಯಕ ನಟ ಶರಣ್‌ ಅವರಿಗೆ ರಾಗಿಣಿ ದ್ವಿವೇದಿ ಜೋಡಿಯಾಗಿದ್ದಾರೆ. ದಿಶಾ ಪಾಂಡೆ, ಅಶೋಕ್, ಅವಿನಾಶ್, ಪ್ರಕಾಶ್ ಬೆಳವಾಡಿ, ಶಿವರಾಜ್ ಕೆ.ಆರ್. ಪೇಟೆ, ಚಿತ್ರಾ ಶೆಣೈ, ಪದ್ಮಜಾ ರಾವ್, ತಬಲ ನಾಣಿ, ಮಕರಂದ್ ದೇಶಪಾಂಡೆ, ತಾರಕ್‌ ಪೊನ್ನಪ್ಪ, ಸಾಧುಕೋಕಿಲ, ರಂಗಾಯಣ ರಘು, ರಾಕ್‍ಲೈನ್ ಸುಧಾಕರ್, ಅಂಥೋಣಿ ಕಮಲ್, ಸುಂದರ್‌ ತಾರಾಬಳಗದಲ್ಲಿದ್ದಾರೆ.

ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಸುಧಾಕರ್ ಎಸ್. ರಾಜ್, ಸಿದ್ಧಾರ್ಥ್ ರಾಮಸ್ವಾಮಿ, ಅನೀಶ್ ತರುಣ್ ಕುಮಾರ್ ಅವರ ಛಾಯಾಗ್ರಹಣವಿದೆ. ಕೆ.ಎಂ. ಪ್ರಕಾಶ್ ಅವರ ಸಂಕಲನವಿದೆ. ಧನಂಜಯ್ ನೃತ್ಯ ನಿರ್ದೇಶಿಸಿದ್ದಾರೆ. ರವಿ ಸಂತೆಹೈಕ್ಲು ಮತ್ತು ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನವಿದೆ.

Post Comments (+)