ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವಾರ ತೆರೆಗೆ ಬರುವ ಕನ್ನಡ ಸಿನಿಮಾಗಳು

Last Updated 20 ಜೂನ್ 2019, 19:30 IST
ಅಕ್ಷರ ಗಾತ್ರ

ಕೃಷ್ಣ ಗಾರ್ಮೆಂಟ್ಸ್

ಷಣ್ಮುಖ ಜಿ. ಬೆಂಡಿಗೇರಿ ನಿರ್ಮಿಸಿರುವ ಚಿತ್ರ ಇದು. ಪ್ರಶಾಂತ್ ರಾವ್ ವರ್ಕು ಅವರು ಇದರ ನಿರ್ಮಾಣ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಕೂಡ ಮಾಡಿದ್ದಾರೆ. ಜೊತೆಗೆ ಅವರೇ ಗೀತರಚನೆಯ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಹಾಸನ, ದೊಡ್ದಬಳ್ಳಾಪುರ, ಬೆಂಗಳೂರು, ಶ್ರವಣಬೆಳಗೊಳ, ಚನ್ನಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಭಾಸ್ಕರ್ ನೀನಾಸಂ ನಾಯಕನಾಗಿ ನಟಿಸಿದ್ದು, ರಶ್ಮಿತಾ ನಾಯಕಿಯಾಗಿ ಅಭಿನಯಿಸಿದ್ದಾರೆ.

ಚಂದನ್ ಗೌಡ, ರಾಜೇಶ್ ನಟರಂಗ, ರಜನಿಕಾಂತ್, ವರ್ಧನ್ ತೀರ್ಥಹಳ್ಳಿ, ಎಚ್.ಎಂ.ಟಿ. ವಿಜಯ್, ಕುಲ್‍ದೀಪ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿದಾನಂದ್ ಹಾಗೂ ಚಂದ್ರಶೇಖರ್ ಅವರ ಛಾಯಾಗ್ರಹಣವಿರುವ ಚಿತ್ರಕ್ಕೆ ರಘು ಧನ್ವಂತ್ರಿ ಸಂಗೀತ ನೀಡಿದ್ದಾರೆ.

ಹಫ್ತಾ

ಮೈತ್ರಿ ಮಂಜುನಾಥ್ ನಿರ್ಮಾಣದ ಹಫ್ತಾ ಚಿತ್ರಕ್ಕೆ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ‘ಯು/ಎ’ ಪ್ರಮಾಣಪತ್ರ ನೀಡಿದೆ. ಚಿತ್ರದ ನಿರ್ದೇಶನ ಪ್ರಕಾಶ್ ಹೆಬ್ಬಾಳ್ ಅವರದ್ದು. ಸೂರಿ ಸಿನಿಟೆಕ್ ಛಾಯಾಗ್ರಹಣ, ವಿಜಿ ಯಾರ್ಡ್ಲಿ ಸಂಗೀತ, ಗೌತಮ್ ಶ್ರೀವತ್ಸ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಇದು ಸಂಪೂರ್ಣ ಕಮರ್ಷಿಯಲ್, ಮನರಂಜನೆಯ ಚಿತ್ರ. ಭೂಗತ ಜಗತ್ತಿನ ಹಫ್ತಾ ವಸೂಲಿ ಮತ್ತು ಸುಫಾರಿ ಕಿಲ್ಲರ್‌ಗಳ ಕಥೆ ಇದರಲ್ಲಿ ಇದೆ. ವರ್ಧನ್ ತೀರ್ಥಹಳ್ಳಿ, ಬಿಂಬಶ್ರೀ ನೀನಾಸಂ, ರಾಘವ್‍ನಾಗ್, ಸೌಮ್ಯ ತತೀರ, ಬಲರಾಜ್ ವಾಡಿ, ದಶಾವರ ಚಂದ್ರು, ಉಗ್ರಂ ರವಿ, ಚಂದ್ರು ತಾರಾಗಣದಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT