ಶುಕ್ರವಾರ, ಡಿಸೆಂಬರ್ 2, 2022
20 °C
ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂತಾರ ಚಲನಚಿತ್ರ ವೀಕ್ಷಿಸಿ ಸಂಭ್ರಮಿಸಿದ್ದಾರೆ.

ಬೆಂಗಳೂರಿನಲ್ಲಿ ಕಾಂತಾರ ಚಿತ್ರ ವೀಕ್ಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ‘ಕಾಂತಾರ‘ ಚಿತ್ರವನ್ನು ವೀಕ್ಷಿಸಿದ್ದಾರೆ.

ಚಿತ್ರ ವೀಕ್ಷಿಸಿದ ಬಳಿಕ ಅವರು ಟ್ವೀಟ್ ಮಾಡಿದ್ದು, ತಂಡಕ್ಕೆ ಶುಭ ಕೋರಿದ್ದಾರೆ.

ರಿಷಬ್ ಶೆಟ್ಟಿಯವರ ನಿರ್ದೇಶನದಲ್ಲಿ ಮೂಡಿಬಂದ ಕಾಂತಾರ ಚಿತ್ರವನ್ನು ವೀಕ್ಷಿಸಿದೆ. ಈ ಚಿತ್ರ ತುಳುವನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಯನ್ನು ತುಂಬಾ ಚೆನ್ನಾಗಿ ಪ್ರಸ್ತುತಪಡಿಸಿದೆ ಎಂದು ಸಚಿವರು ಶ್ಲಾಘಿಸಿದ್ದಾರೆ.

ಬೆಂಗಳೂರಿನ ಅಶೋಕನಗರದ ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಸಚಿವರು ಚಿತ್ರ ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ‘ ಚಿತ್ರ 30 ದಿನಗಳನ್ನು ಪೂರೈಸಿ, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು