ಭಾನುವಾರ, ಸೆಪ್ಟೆಂಬರ್ 19, 2021
30 °C

ನಟ ರಜತ್‌ ಬೇಡಿ ವಿರುದ್ಧ ಹಿಟ್‌ ಅಂಡ್‌ ರನ್‌ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ನಟ ರಜತ್‌ ಬೇಡಿ ವಿರುದ್ಧ ಹಿಟ್‌ ಅಂಡ್‌ ರನ್‌ ಪ್ರಕರಣ ಮಂಗಳವಾರ ದಾಖಲಾಗಿದೆ.

ಸೋಮವಾರ ರಾತ್ರಿ ರಜತ್‌ ಬೇಡಿ ಚಲಾಯಿಸುತ್ತಿದ್ದ ಕಾರು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ಆ ವ್ಯಕ್ತಿಯನ್ನು ರಜತ್‌ ಬೇಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. 

ಇಲ್ಲಿನ ಡಿ.ಎನ್‌.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ. ಪ್ರಕರಣ ಸಂಬಂಧ ರಜತ್‌ ಬೇಡಿಯನ್ನು ಪೊಲೀಸರು ಇದುವರೆಗೂ ಬಂಧಿಸಿಲ್ಲ. ತನಿಖೆ ಪ್ರಗತಿಯ ಹಂತದಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಜತ್ ಬೇಡಿ ಕನ್ನಡ ಸಿನಿಮಾದಲ್ಲೂ ನಟಿಸಿದ್ದಾರೆ. ನಟ ದರ್ಶನ್‌ ಅಭಿನಯದ ’ಜಗ್ಗು ದಾದ’ ಸಿನಿಮಾದಲ್ಲಿ ರಜತ್‌ ಬೇಡಿ ನಟಿಸಿದ್ದರು. ಇವರಿಗೆ ಹಿಂದಿಯ ’ಕೊಯಿ ಮಿಲ್‌ ಗಯಾ’ ಸಿನಿಮಾ ಹೆಚ್ಚು ಖ್ಯಾತಿಯನ್ನು ತಂದುಕೊಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು