ಸೋಮವಾರ, ಅಕ್ಟೋಬರ್ 26, 2020
28 °C

ನಟಿ ಕಂಗನಾ ರನೌತ್ ವಿರುದ್ಧ ತುಮಕೂರಲ್ಲಿ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್‌ ದಾಖಲಾಗಿದೆ.

ಕಂಗನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹೈಕೋರ್ಟ್ ವಕೀಲ ರಮೇಶ್ ನಾಯಕ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ವಿನೋದ್ ಬಾಲನಾಯಕ್ ಅವರು ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಶುಕ್ರವಾರ ನಿರ್ದೇಶನ ನೀಡಿದ್ದರು. ಹಾಗಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ರೈತರನ್ನು ಭಯೋತ್ಪಾದಕರೆಂದು ನಿಂದಿಸಿ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶ ಹಾಗೂ ದೊಂಬಿಗೆ ಪ್ರಚೋದನೆ ನೀಡುವಂತ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ ಲಕ್ಷಾಂತರ ರೈತರ ಮನಸ್ಸಿಗೆ ಘಾಸಿಯಾಗಿದೆ’ ಎಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು