ಗುರುವಾರ , ಜೂನ್ 24, 2021
29 °C

ನಿರ್ಮಾಪಕಿ ವಂದನಾ ಜೈನ್ ಮೇಲೆ ಮದ್ಯ ಎರಚಿ ಹಲ್ಲೆ: ನಟಿ ಸಂಜನಾ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ಮಾಪಕಿ ವಂದನಾ ಜೈನ್ ಮೇಲೆ ಮದ್ಯ ಎರಚಿ ಹಲ್ಲೆ ಮಾಡಿದ್ದ ಆರೋಪದಡಿ ನಟಿ ಸಂಜನಾ ಗರ್ಲಾನಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘2019ರ ಡಿಸೆಂಬರ್‌ನಲ್ಲಿ ನಡೆದಿದ್ದ ಘಟನೆ ಸಂಬಂಧ ವಂದನಾ ಜೈನ್ ಅವರು ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು. ನ್ಯಾಯಾಲಯ ನೀಡಿರುವ ಆದೇಶದನ್ವಯ ಸಂಜನಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕ್ಲಬ್‌ವೊಂದರಲ್ಲಿ ಸಂಜನಾ ಹಾಗೂ ವಂದನಾ ಭೇಟಿಯಾಗಿದ್ದರು. ಅವರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದಿತ್ತು. ಇದೇ ಸಂದರ್ಭದಲ್ಲೇ ಸಂಜನಾ ಅವರು ವಂದನಾ ಮೇಲೆ ಹಲ್ಲೆ ಮಾಡಿರುವ ಆರೋಪವಿದೆ. ತನಿಖೆಯಿಂದಲೇ ನಿಖರ ಮಾಹಿತಿ ತಿಳಿಯಬೇಕಿದೆ’ ಎಂದೂ ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು