ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ ಪ್ರಕರಣ: ಯೂಟ್ಯೂಬರ್ ಬಂಧನ

ಮುಂಬೈ ಪೊಲೀಸರಿಂದ ಹೊಸ ಪ್ರಕರಣ ದಾಖಲು
Published 16 ಜೂನ್ 2024, 14:04 IST
Last Updated 16 ಜೂನ್ 2024, 14:04 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟ ಸಲ್ಮಾನ್‌ ಖಾನ್ ಅವರ ನಿವಾಸದ ಹೊರಗೆ ಏಪ್ರಿಲ್ ತಿಂಗಳಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಹೊಸ ಪ್ರಕರಣವನ್ನು ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು, ಇದಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ಒಬ್ಬರನ್ನು ಬಂಧಿಸಿದ್ದಾರೆ.

ರಾಜಸ್ಥಾನದ ಬುಂಡಿ ಮೂಲದ ಬನ್ವರಿಲಾಲ್ ಲಟೂರ್‌ಲಾಲ್‌ ಗುಜರ್ (25) ಬಂಧಿತ ವ್ಯಕ್ತಿ ಎಂದು ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಯು ಭಾನುವಾರ ತಿಳಿಸಿದ್ದಾರೆ.

ಗುಜರ್ ರಾಜಸ್ಥಾನದ ಹೆದ್ದಾರಿಯಲ್ಲಿ ವಿಡಿಯೊವೊಂದನ್ನು ಮಾಡಿದ್ದು, ಅದನ್ನು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾನೆ. ಅದರಲ್ಲಿ ‘ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ಇತರ ಗ್ಯಾಂಗ್‌ನ ಸದಸ್ಯರು ನನ್ನೊಂದಿಗೆ ಇದ್ದಾರೆ. ಸಲ್ಮಾನ್ ಖಾನ್ ಇನ್ನೂ ಕ್ಷಮೆ ಕೇಳದಿದ್ದರಿಂದ ನಾನು ಆತನನ್ನು ಕೊಲ್ಲಲಿದ್ದೇನೆ ಎಂದು ಹೇಳಿಕೊಂಡಿದ್ದಾನೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಗಾಗಿ ತಂಡವೊಂದನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿತ್ತು. ಗುಜರ್‌ನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಆರೋಪಿಗೆ ಕ್ರಿಮಿನಲ್ ಹಿನ್ನೆಲೆಯ ನಂಟಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆದಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT