ಮಂಗಳವಾರ, ಮೇ 24, 2022
31 °C

ಪುನೀತ್‌ ಸಮಾಧಿ ಮುಂದೆ ‘ಬನಾರಸ್‌’ ಫಸ್ಟ್‌ಲುಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ - ಸೋನಲ್ ಮೋಂತೆರೋ ನಾಯಕ,‌ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಬನಾರಸ್’.

ಈ ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರನ್ನು ನಟ ದಿವಂಗತ ಪುನೀತ್ ರಾಜಕುಮಾರ್ ಸಮಾಧಿಯ ಮುಂದೆ ಬಿಡುಗಡೆ ಮಾಡಲಾಯಿತು. ಡಾ.ರಾಜಕುಮಾರ್, ಪಾರ್ವತಮ್ಮ ರಾಜ್‍ಕುಮಾರ್, ಅಂಬರೀಶ್ ಹಾಗೂ ಪುನೀತ್ ರಾಜ್‍ಕುಮಾರ್ ಅವರ‌ ಸಮಾಧಿಗಳಿಗೆ ಹಾಗೂ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸಮಾಧಿಗೂ ಪೂಜೆ ಸಲ್ಲಿಸಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಈ ಚಿತ್ರ ನಿರ್ಮಾಣವಾಗಿದೆ. 

‘ಈ ದಿನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರೇ ಖುದ್ದಾಗಿ ಬನಾರಸ್‌ನ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್ಕನ್ನು ಬಿಡುಗಡೆಗೊಳಿಸಬೇಕಿತ್ತು. ದುರದೃಷ್ಟವಶಾತ್ ಅವರು ಮರೆಯಾಗಿದ್ದಾರೆ. ಅವರು ತೋರಿದ ಪ್ರೀತಿಯನ್ನು ಮನಸ್ಲಿನಲ್ಲಿ ಇಟ್ಟುಕೊಂಡು ಅವರ ಪುಣ್ಯಭೂಮಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಚಿತ್ರತಂಡ ಹೇಳಿದೆ. 

ನಿರ್ಮಾಪಕ, ನಿರ್ದೇಶಕ ಜಯತೀರ್ಥ ಹಾಸ್ಯ ನಟ ಸುಜಯ್ ಮುಂತಾದವರು ಇದ್ದರು.

ಶೇ 90ರಷ್ಟು ಚಿತ್ರೀಕರಣ ಬನಾರಸ್‌ನಲ್ಲೇ ನಡೆದಿದೆ. ಏಕಕಾಲದಲ್ಲಿಯೇ ಐದು ಭಾಷೆಗಳಲ್ಲಿ ತಯಾರಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು