ಶನಿವಾರ, ಫೆಬ್ರವರಿ 29, 2020
19 °C

ಫಸ್ಟ್ ರ್‍ಯಾಂಕ್ ಟೆರರಿಸ್ಟ್‌ ಆದಿತ್ಯ: ಮಂಗಳೂರು ಬಾಂಬ್‌ ಆರೋಪಿ ಹೆಸರಲ್ಲಿ ಸಿನಿಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ, ಪೊಲೀಸರಿಗೆ ಶರಣಾದ ಆದಿತ್ಯ ರಾವ್‌ನ ಕಥೆ ಆಧರಿಸಿ ಸಿನಿಮಾ ಮಾಡಲು ನಿರ್ಮಾಪಕ ತುಳಸಿ ರಾಮ್ ಮುಂದಾಗಿದ್ದಾರೆ.

‘ಫಸ್ಟ್ ರ್‍ಯಾಂಕ್ ಟೆರರಿಸ್ಟ್‌ ಆದಿತ್ಯ’ ಎಂಬ ಶೀರ್ಷಿಕೆಯನ್ನು ತುಳಸಿ ರಾಮ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಗುರುವಾರ ನೋಂದಣಿ ಮಾಡಿಸಿದ್ದಾರೆ.

‘ಈ ಚಿತ್ರದ ಚಿತ್ರೀಕರಣವು ಇನ್ನು ಎರಡರಿಂದ ಮೂರು ತಿಂಗಳಲ್ಲಿ ಆರಂಭವಾಗುತ್ತದೆ. ಬಿ.ಆರ್. ಕೇಶವ್ ಅವರು ಚಿತ್ರದ ನಿರ್ದೇಶನ ಮಾಡಲಿದ್ದಾರೆ’ ಎಂದು ತುಳಸಿ ಅವರು ತಿಳಿಸಿದರು.

ಆದಿತ್ಯ ಅವರ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಹಾಗೂ ಪ್ರಸಾರವಾಗಿರುವ ವರದಿ, ಕಾರ್ಯಕ್ರಮಗಳನ್ನು ಆಧರಿಸಿ ಕಥೆ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು