ಭಾನುವಾರ, ನವೆಂಬರ್ 1, 2020
20 °C

ರೈತ ಹೋರಾಟದಲ್ಲಿ ಭಾಗವಹಿಸಿದ್ದ ಬಿಗ್‌ಬಾಸ್ ಸ್ಪರ್ಧಿ ಹಿಮಾಂಶಿ ಖುರಾನಾಗೆ ಕೊರೊನಾ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Himanshi Khurana

ನವದೆಹಲಿ: ಬಿಗ್ ಬಾಸ್ ಸೀಸನ್ 13ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಖ್ಯಾತಿಯ ನಟಿ ಹಿಮಾಂಶಿ ಖುರಾನಾ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡ ನಂತರವೂ ನನಗೆ ಕೋವಿಡ್-19 ಸೋಂಕು ತಗುಲಿದೆ ಎಂಬುದನ್ನು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ನಾನು ನಿನ್ನೆ ನಡೆದ ಪ್ರತಿಭಟನೆಯ ಭಾಗವಾಗಿದ್ದೆ ಮತ್ತು ಆ ಪ್ರದೇಶವು ಕಿಕ್ಕಿರಿದಿತ್ತು ಎಂಬುದು ನಿಮಗೆಲ್ಲರಿಗೂ ತಿಳಿದೇ ಇದೆ. ಹಾಗಾಗಿ ಇಂದು ಸಂಜೆ ಚಿತ್ರೀಕರಣಕ್ಕೆ ಹೋಗುವ ಮುನ್ನ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತೀರ್ಮಾನಿಸಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಎಂದಿದ್ದಾರೆ.

ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಲು ಬಯಸುತ್ತೇನೆ ಮತ್ತು ದಯವಿಟ್ಟು ಪ್ರತಿಭಟನೆಯಲ್ಲಿ ತೊಡಗುವವರು ಸರಿಯಾದ ಮುನ್ನೆಚ್ಚರಿಕೆ ವಹಿಸಿ. ನಾವೀಗ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿದ್ದೇವೆ ಎಂಬುದನ್ನು ಮರೆಯಬಾರದು ಎಂದು ಪ್ರತಿಭಟಿಸುವ ಎಲ್ಲ ಜನರಿಗೆ ವಿನಂತಿ ಮಾಡುತ್ತೇನೆ. ಆದ್ದರಿಂದ ದಯವಿಟ್ಟು ಸರಿಯಾದ ಕಾಳಜಿ ವಹಿಸಿ ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಬಿಗ್‌ಬಾಸ್ ಸೀಸನ್ 13ರ ನಂತರ ಹಿಮಾಂಶಿ ಖುರಾನಾ ಅವರು ಬಿಗ್‌ಬಾಸ್‌ 13ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ಅಸಿಮ್ ರಿಯಾಜ್ ಅವರೊಂದಿಗೆ ಹಲವಾರು ಮ್ಯೂಸಿಕ್ ವಿಡಿಯೊಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸುದ್ದು ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು