ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾದ ಟ್ರೇಲರ್ಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಟ್ರೇಲರ್ ಬಿಡುಗಡೆಯಾಗಿ 48 ಗಂಟೆಯ ಒಳಗೆ ಬರೋಬ್ಬರಿ 2.5 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

ಈ ಬಗ್ಗೆ ಖುದ್ದು ಕೆವಿಎನ್ ಪ್ರೊಡಕ್ಷನ್ಸ್ ಸಾಮಾಜಿಕ ಮಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ. ‘25ಕ್ಕೂ ಅಧಿಕ ಮಿಲಿಯನ್ ವೀಕ್ಷಣೆ ಇನ್ನೂ ಮುಂದುವರೆಯುತ್ತಿದೆ’ ಎಂದು ಬರೆಯುವ ಮೂಲಕ ಪೋಸ್ಟರ್ ಹಂಚಿಕೊಂಡಿದೆ. ಡಿಸೆಂಬರ್ 15ರಂದು ಸಂಜೆ 6.45ಕ್ಕೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಏಕಕಾಲಕ್ಕೆ 7 ಜಿಲ್ಲೆಯಲ್ಲಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿತ್ತು. ಟ್ರೇಲರ್ ವೀಕ್ಷಿಸಿದ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ 48 ಗಂಟೆಯೊಳಗೆ 45 ಸಿನಿಮಾ 2.5 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡು ಮುನ್ನುಗ್ಗುತ್ತಿದೆ.

ಇನ್ನು, ಬಿಡುಗಡೆಯಾದ ಟ್ರೇಲರ್ನಲ್ಲಿ ಪ್ರಮುಖವಾಗಿ ಶಿವಣ್ಣ ಹುಡುಗಿಯ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾದ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ಆನಂದ್ ಆಡಿಯೋಸ್ ಯೂಟ್ಯೂಬ್ ಚಾನೆಲ್ನಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ.
.ಬಿಡುಗಡೆಗೂ ಮುನ್ನವೇ ‘45’ ಸಿನಿಮಾದ ಡಿಜಿಟಲ್, ಸ್ಯಾಟಲೈಟ್ ಹಕ್ಕು ಜೀ ಪಾಲು.45 Movie: ಚೆಲುವೆಯ ನೋಟ ಚೆನ್ನ... ನಾಚಿ ನೀರಾದ ಶಿವಣ್ಣ.
ಇನ್ನು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಹಾಗೂ ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘45‘ ಇದೇ ಡಿಸೆಂಬರ್ 25ರ ಕ್ರಿಸ್ಮಸ್ ದಿನದಂದು ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.