ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾಹಂದರವನ್ನು ಹೊಂದಿರುವ ಈ ಸಿನಿಮಾವನ್ನು ಚಿತ್ರದುರ್ಗದ ಎನ್.ವಿನಾಯಕ ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾ. ಲಿಖಿತ್ ಶೆಟ್ಟಿ ಫಿಲ್ಮ್ಸ್ ಬ್ಯಾನರ್‌ನಡಿ ಈ ಸಿನಿಮಾ ನಿರ್ಮಾಣವಾಗಿದೆ. ಚಿತ್ರಕ್ಕೆ ಹರೀಶ್ ಗೌಡ ಸಂಭಾಷಣೆ, ಮನೋಹರ್ ಜೋಷಿ ಛಾಯಾಚಿತ್ರಗ್ರಹಣ, ಗುರುಕಿರಣ್ ಸಂಗೀತ, ದೀಪು ಎಸ್. ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ. ರಂಗಾಯಣ ರಘು, ಸೂರಜ್, ವಿಜಯ್ ಚಂಡೂರ್, ರವಿಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ.