ಭಾನುವಾರ, ನವೆಂಬರ್ 27, 2022
26 °C

'ಚೆಲ್ಲೊ ಶೋ' ಭಾರತೀಯ ಸಿನಿಮಾ ಅಲ್ಲ: ಬಿ.ಎನ್‌ ತಿವಾರಿ ಆರೋಪ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಆಸ್ಕರ್‌ ಸ್ಪರ್ಧೆಗೆ ಆಯ್ಕೆಯಾಗಿರುವ ‘ಚೆಲ್ಲೊ ಶೋ’ ಸಿನಿಮಾ ಭಾರತೀಯ ಸಿನಿಮಾ ಅಲ್ಲ ಎಂದು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಘ ಆರೋಪ ಮಾಡಿದೆ.

ಈ ಬಗ್ಗೆ ಮಾತನಾಡಿರುವ ಸಿನಿ ಎಂಪ್ಲಾಯೀಸ್ ಸಂಘದ ಅಧ್ಯಕ್ಷ ಬಿ.ಎನ್‌ ತಿವಾರಿ ಅವರು ‘ಚೆಲ್ಲೊ ಶೋ’ ಸಿನಿಮಾ ವಿದೇಶಿ ಸಿನಿಮಾವಾಗಿದೆ, ಇದನ್ನು  ಸಿದ್ದಾರ್ಥ್ ರಾಯ್ ಕಪೂರ್ ಅವರು ಖರೀದಿ ಮಾಡಿದ್ದಾರೆ. ಆಯ್ಕೆ ಸಮಿತಿಯ ಜ್ಯೂರಿ ಸಿನಿಮಾವನ್ನು ವೀಕ್ಷಣೆ ಮಾಡದೇ ಚಿತ್ರವನ್ನು ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಭಾರತೀಯ ಚಲನಚಿತ್ರ ಫೆಡರೇಷನ್ಗೆ ಪತ್ರ ಬರೆದಿದ್ದು ಈ ಆಯ್ಕೆಯನ್ನು ಪುನರ್‌ ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಹಾಗೇ ಆಯ್ಕೆ ಸಮಿತಿಯಲ್ಲಿ ಹಲವಾರು ವರ್ಷಗಳಿಂದ ಹಳೆಯ ಜ್ಯೂರಿಗಳೇ ಇದ್ದು ಅವರನ್ನು ಬದಲಾವಣೆ ಮಾಡಬೇಕು ಎಂದು ಹೇಳಿದ್ದಾರೆ. 

ಆರ್‌ಆರ್‌ಆರ್‌ ಹಾಗೂ ದಿ ಕಾಶ್ಮೀರ್ ಫೈಲ್ಸ್ ರೀತಿಯ ಚಿತ್ರಗಳು ಆಸ್ಕರ್‌ ಸ್ಪರ್ಧೆಗೆ ಆಯ್ಕೆಯಾಗಬೇಕು ಎಂಬ ಕೂಗು ಸಹ ಕೇಳಿ ಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಗುಜರಾತಿ ಚಲನಚಿತ್ರ ‘ಚೆಲ್ಲೊ ಶೋ’ 95ನೇ ಅಕಾಡೆಮಿ ಪ್ರಶಸ್ತಿಗೆ (2023ರ ಆಸ್ಕರ್‌ ಪ್ರಶಸ್ತಿ) ಅಧಿಕೃತ ಪ್ರವೇಶ ಪಡೆದಿರುವ ಭಾರತೀಯ ಚಲನಚಿತ್ರವಾಗಿದೆ.

ಮುಖ್ಯಪಾತ್ರಗಳಲ್ಲಿ ಭವಿನ್‌ ರಾಬರಿ, ಭವೇಶ್‌ ಶ್ರೀಮಲಿ, ರಿಚಾ ಮೀನಾ, ದಿಪೇನ್‌ ರಾವಲ್‌ ಮತ್ತು ಪರೇಶ್‌ ಮೆಹ್ತಾ ಕಾಣಿಸಿಕೊಂಡಿದ್ದಾರೆ. ಗುಜರಾತ್‌ನ ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ಕಳೆವ ವೇಳೆ ತಾವು ಚಲನಚಿತ್ರಗಳಿಗೆ ಮನಸೋಲುತ್ತಿದ್ದ ನೆನಪುಗಳನ್ನೇ ಸ್ಫೂರ್ತಿಯಾಗಿಸಿಕೊಂಡು ನಿರ್ದೇಶಕ ಪಾನ್‌ ನಳಿನ್‌ ಅವರು ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು