ಬುಧವಾರ, ಆಗಸ್ಟ್ 10, 2022
25 °C

ಬರ್ತಿದೆ ಗಜಾನನ ಆ್ಯಂಡ್‌ ಗ್ಯಾಂಗ್‌!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಒಬ್ಬ ಹೀರೊ..ಒಬ್ಳು ಹೀರೊಯಿನ್‌..ಒಬ್ಬ ವಿಲನ್‌ ಇದ್ರೆ ಕಥೆ ಮುಗಿತಾ?’ ಎಂದು ಪ್ರಶ್ನಿಸುತ್ತಾ ಬಂದಿದೆ ಶ್ರೀ ಮಹಾದೇವ್‌ ಹಾಗೂ ಅದಿತಿ ಪ್ರಭುದೇವ ನಟನೆಯ ‘ಗಜಾನನ ಆ್ಯಂಡ್‌ ಗ್ಯಾಂಗ್’.

‘ನಮ್ ಗಣಿ ಬಿಕಾಂ ಪಾಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕ ಮತ್ತು ನಿರ್ದೇಶಕನಾಗಿ ಪ್ರವೇಶಿಸಿದ ಅಭಿಷೇಕ್ ಶೆಟ್ಟಿ ‘ಗಜಾನನ ಆ್ಯಂಡ್‌ ಗ್ಯಾಂಗ್’ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ನಟಿ ಮೇಘನಾ ರಾಜ್‌ ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಗೊಳಿಸಿದರು.

ಚಿತ್ರದ ಶೀರ್ಷಿಕೆಯೇ ಹೇಳುವಂತೆ ಐವರು ಕಾಲೇಜು ಗೆಳೆಯರ ಕಥೆಯಾಧಾರಿತ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಶ್ರೀ ಎರಡು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಗಜ’ ಎಂಬ ಪಾತ್ರದಲ್ಲಿ ಶ್ರೀ ನಟಿಸಿದ್ರೆ, ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕುಟುಂಬದ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಅಭಿಷೇಕ್ ಶೆಟ್ಟಿ ಕೂಡಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಬೃಂದಾವನ್ ಎಂಟರ್‌ಪ್ರೈಸಸ್ ಅಡಿಯಲ್ಲಿ ಯು.ಎಸ್.ನಾಗೇಶ್ ಕುಮಾರ್ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಪ್ರದ್ಯುತನ್ ಸಂಗೀತ ನೀಡಿದ್ದು, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಚಿತ್ರಕ್ಕಿದೆ. ಉಳಿದಂತೆ ಬಿಗ್‌ಬಾಸ್ ಖ್ಯಾತಿಯ ರಘು ಗೌಡ, ಚೇತನ್ ದುರ್ಗ, ನಾಟ್ಯ ರಂಗ, ಅಶ್ವಿನ್ ಹಾಸನ್ ಹಾಗೂ ಶಮಂತ್ ಊರುಫ್ ಬ್ರೋ ಗೌಡ ಕೂಡ ನಟಿಸಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು