ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 4ಕ್ಕೆ ‘ಗಜಾನನ ಆ್ಯಂಡ್‌ ಗ್ಯಾಂಗ್‌’ ಬಿಡುಗಡೆ

Last Updated 30 ಡಿಸೆಂಬರ್ 2021, 19:30 IST
ಅಕ್ಷರ ಗಾತ್ರ

ಈಗಾಗಲೇ ಟ್ರೇಲರ್‌ ಮೂಲಕವೇ ಸದ್ದು ಮಾಡಿರುವ ‘ಗಜಾನನ ಆ್ಯಂಡ್‌ ಗ್ಯಾಂಗ್‌’ ಹುಡುಗರು 2022ರ ಫೆ.4ರಂದು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಶ್ರೀ ಮಹಾದೇವ್‌ ಹಾಗೂ ಅದಿತಿ ಪ್ರಭುದೇವ ನಟನೆಯ ಈ ಸಿನಿಮಾಗೆ, ‘ನಮ್ ಗಣಿ ಬಿಕಾಂ ಪಾಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕ ಮತ್ತು ನಿರ್ದೇಶಕನಾಗಿ ಪ್ರವೇಶಿಸಿದ ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಚಿತ್ರದ ಶೀರ್ಷಿಕೆಯೇ ಹೇಳುವಂತೆ ಕಾಲೇಜು ಕಥೆಯಾಧಾರಿತ ಸಿನಿಮಾ ಇದಾಗಿದ್ದು, ಹಾಸ್ಯ, ಭಾವನಾತ್ಮಕತೆಯೂ ಸಿನಿಮಾದಲ್ಲಿದೆ. ಶ್ರೀ ಮಹಾದೇವ್, ಗಜ ಎಂಬ ಪಾತ್ರದಲ್ಲಿ ಎರಡು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ನಟಿಸಿದ್ದಾರೆ.

ನಿರ್ದೇಶಕ ಅಭಿಷೇಕ್ ಶೆಟ್ಟಿ ಕೂಡಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ರಘು ಗೌಡ, ಚೇತನ್ ದುರ್ಗ, ನಾಟ್ಯ ರಂಗ, ಅಶ್ವಿನ್ ಹಾಸನ್ ಹಾಗೂ ಶಮಂತ್ ಊರೂಫ್ ಬ್ರೋ ಗೌಡ ಕೂಡ ಈ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ.

ಬೃಂದಾವನ್ ಎಂಟರ್‌ಪ್ರೈಸಸ್ ಅಡಿಯಲ್ಲಿ ಯು.ಎಸ್.ನಾಗೇಶ್ ಕುಮಾರ್ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಪ್ರದ್ಯುತನ್ ಸಂಗೀತ ನೀಡಿದ್ದು, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT