ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 3ಕ್ಕೆ ‘ಗಜಾನನ ಆ್ಯಂಡ್‌ ಗ್ಯಾಂಗ್‌’ ತೆರೆಗೆ

Last Updated 11 ಏಪ್ರಿಲ್ 2022, 10:06 IST
ಅಕ್ಷರ ಗಾತ್ರ

ನಟ ಶ್ರೀಮಹದೇವ್ ಹಾಗೂ ನಟಿ ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ‘ಗಜಾನನ ಆ್ಯಂಡ್‌ ಗ್ಯಾಂಗ್’ ಸಿನಿಮಾ ಜೂನ್‌ 3ಕ್ಕೆ ಬಿಡುಗಡೆಯಾಗಲಿದೆ.

ಕಳೆದ ಫೆಬ್ರುವರಿ 4ರಂದೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರ ಲಾಕ್‌ಡೌನ್‌ ಹೇರಿದ ಕಾರಣ ಬಿಡುಗಡೆಯನ್ನು ಮುಂದೂಡಲಾಗಿತ್ತು. ಈಗ ಸಿನಿಮಾ ತಂಡ ಹೊಸ ಬಿಡುಗಡೆ ದಿನಾಂಕ ಘೋಷಿಸಿದೆ. ಈ ಸಿನಿಮಾಗೆ, ‘ನಮ್ ಗಣಿ ಬಿಕಾಂ ಪಾಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕ ಮತ್ತು ನಿರ್ದೇಶಕನಾಗಿ ಪ್ರವೇಶಿಸಿದ ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇದೊಂದು ಕಾಲೇಜು ಕಥೆಯಾಧಾರಿತ ಸಿನಿಮಾವಾಗಿದ್ದು, ಹಾಸ್ಯ, ಭಾವನಾತ್ಮಕತೆಯೂ ಸಿನಿಮಾದಲ್ಲಿದೆ. ಶ್ರೀಮಹದೇವ್, ಗಜ ಎಂಬ ಪಾತ್ರದಲ್ಲಿ ಎರಡು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, ಅದಿತಿ ಪ್ರಭುದೇವ ಮಧ್ಯಮ ವರ್ಗದ ಕಾಲೇಜು ಹುಡುಗಿಯಾಗಿ ನಟಿಸಿದ್ದಾರೆ. ನಿರ್ದೇಶಕ ಅಭಿಷೇಕ್ ಶೆಟ್ಟಿ ಕೂಡಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ರಘು ಗೌಡ, ಚೇತನ್ ದುರ್ಗ, ನಾಟ್ಯ ರಂಗ, ಅಶ್ವಿನ್ ಹಾಸನ್ ಹಾಗೂ ಶಮಂತ್ (ಬ್ರೋ ಗೌಡ) ಈ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ.

ಬೃಂದಾವನ್ ಎಂಟರ್‌ಪ್ರೈಸಸ್ ಅಡಿಯಲ್ಲಿ ಯು.ಎಸ್.ನಾಗೇಶ್ ಕುಮಾರ್ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಪ್ರದ್ಯುತನ್ ಸಂಗೀತ ನೀಡಿದ್ದು, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT