ಗುರುವಾರ , ಜನವರಿ 21, 2021
23 °C

ಸಂಕ್ರಾಂತಿ ಸಂಭ್ರಮಕ್ಕೆ ಸಜ್ಜಾದ ‘ಗಾಜನೂರು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವರಿ 15 ಸುಗ್ಗಿ ಹಬ್ಬ ಸಂಕ್ರಾಂತಿ. ಈ ಹಬ್ಬದ ಸಂಭ್ರಮದಲ್ಲೇ ಜನವರಿ 16 ರಂದು ‘ಗಾಜನೂರು’ ಎಂಬ ನೂತನ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೀರ್ತಿ ಕಥೆ, ಚಿತ್ರಕಥೆ ಬರೆದಿದ್ದು, ವಿಜಯ್ ನಿರ್ದೇಶಿಸುತ್ತಿದ್ದಾರೆ.

ಎಸ್.ಮೋಹನ್, ನಂದಕಿಶೋರ್ ಮುಂತಾದ ಖ್ಯಾತ ನಿರ್ದೇಶಕರ ಬಳಿ ಸಹನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ವಿಜಯ್ ಅವರ ನಿರ್ದೇಶನದ ಮೊದಲ ಚಿತ್ರ ‘ಗಾಜನೂರು’.

ಮೂಲತಃ ಕಲಬುರ್ಗಿಯವರಾದ ಅವಿನಾಶ್ ತಮ್ಮ ಕೃತಿಕಾರಾಮ್ ಮೂವೀಸ್ ಮೂಲಕ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಇದು ಅವರ ನಿರ್ಮಾಣದ ಚೊಚ್ಚಲ ಚಿತ್ರ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ನೀಡುತ್ತಿದ್ದಾರೆ. ತನ್ವಿಕ್ ಛಾಯಾಗ್ರಹಣ, ಅಮಿತ್ ಜಾವಾಳ್ಕರ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಭೂಷಣ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಕ್ರಾಂತಿಕುಮಾರ್ ಸಂಭಾಷಣೆ ಬರೆಯುತ್ತಿದ್ದಾರೆ. ತೀರ್ಥಹಳ್ಳಿ, ಬೆಂಗಳೂರಿನಲ್ಲಿ 35 ದಿನಗಳ ಚಿತ್ರೀಕರಣ ನಡೆಯಲಿದೆ.‌

ಅವತಾರ್, ರವಿಶಂಕರ್, ತಬಲಾನಣಿ, ಕುರಿ ಪ್ರತಾಪ್, ಗೋಪಾಲಕೃಷ್ಣ ದೇಶಪಾಂಡೆ, ಬಾಬು ಹಿರಣ್ಣಯ್ಯ, ತರಂಗ ವಿಶ್ವ, ವಾಣಿ, ಸಂತು ಮುಂತಾದವರು ಈ ಚಿತ್ರದ ‌ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು