ಶನಿವಾರ, ಡಿಸೆಂಬರ್ 3, 2022
19 °C

‘ಗಜರಾಮ’ನ ಬೆಡಗಿ ತಪಸ್ವಿನಿ; ಮೊದಲ ಹಂತದ ಚಿತ್ರೀಕರಣ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುನೀಲ್ ಕುಮಾರ್ ವಿ.ಎ. ನಿರ್ದೇಶನದ ಚೊಚ್ಚಲ ಸಿನಿಮಾ, ರಾಜವರ್ಧನ್‌ ನಟನೆಯ ‘ಗಜರಾಮ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ಸೆಟ್ಟೇರಿದ ದಿನದಿಂದಲೇ ಚಿತ್ರೀಕರಣ ಆರಂಭಿಸಿದ ಚಿತ್ರತಂಡ, ಬೆಂಗಳೂರಿನಲ್ಲೇ 16 ದಿನಗಳ ಮೊದಲ ಹಂತದ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ.

ಪ್ರೇಮಕಥೆ ಹಾಗೂ ಮಾಸ್ ಆ್ಯಕ್ಷನ್ ಕಥಾಹಂದರದ ಈ ಚಿತ್ರದಲ್ಲಿ ರಾಜವರ್ಧನ್‌ಗೆ ಜೋಡಿಯಾಗಿ ‘ಹರಿಕಥೆ ಅಲ್ಲ ಗಿರಿಕಥೆ’ ಖ್ಯಾತಿಯ ತಪಸ್ವಿನಿ ಪೂಣಚ್ಚ ನಟಿಸುತ್ತಿದ್ದಾರೆ.

ಚಿತ್ರದ ಮೊದಲ ಶೆಡ್ಯೂಲ್ ಮುಗಿದ್ದಿದ್ದು ಎರಡನೇ ಹಂತದ ಚಿತ್ರೀಕರಣಕ್ಕಾಗಿ ಚಿತ್ರತಂಡ ಸ್ಥಳದ ಹುಡುಕಾಟ ಆರಂಭಿಸಿದೆ. ಇನ್ನೂ ನಲವತ್ತು ದಿನಗಳ ಶೂಟಿಂಗ್ ಬಾಕಿ ಇದೆ ಎಂದಿದೆ ಚಿತ್ರತಂಡ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಹಾಯಕ ನಿರ್ದೇಶಕರಾಗಿ ಸುನೀಲ್‌ ಕಾರ್ಯನಿರ್ವಹಿಸಿದ್ದರು. ಇದು ಅವರ ಮೊದಲ ಸಿನಿಮಾ. ಶಿಷ್ಯ ದೀಪಕ್ ಚಿತ್ರದ ಪ್ರಮುಖ ಪಾತ್ರದಲ್ಲಿ ಮಿಂಚುತ್ತಿದ್ದು, ಖಳನಟನಾಗಿ ‘ಪೈಲ್ವಾನ್’ ಖ್ಯಾತಿಯ ಕಬೀರ್ ದುಹಾನ್ ಸಿಂಗ್ ನಟಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತು, ಗೋವಿಂದೇ ಗೌಡ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್‌ನಡಿ ನರಸಿಂಹ ಮೂರ್ತಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೋಮೂರ್ತಿ ಸಂಗೀತ ನಿರ್ದೇಶನ, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಚಿತ್ರಕ್ಕಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು