ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಂಧದ ಗುಡಿ’ ಪೋಸ್ಟರ್ ಬಿಡುಗಡೆ: ಗಜನ ಜೊತೆ ಪುನೀತ್‌ ಆಗಮನ

Last Updated 1 ಸೆಪ್ಟೆಂಬರ್ 2022, 7:31 IST
ಅಕ್ಷರ ಗಾತ್ರ

ಬೆಂಗಳೂರು:ಗಣೇಶ ಹಬ್ಬದ ಪ್ರಯುಕ್ತ ದಿವಂಗತಪುನೀತ್ ರಾಜ್‌ಕುಮಾರ್‌ಅಭಿನಯದ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಹೊಸ ಪೋಸ್ಟರ್‌ ಬಿಡುಗಡೆಯಾಗಿದೆ.

ಪುನೀತ್ ‘ಪಿಆರ್ಕೆ ಪ್ರೊಡಕ್ಷನ್ಸ್’ ಸ್ಥಾಪಿಸಿ ಹೊಸ ಪ್ರತಿಭೆಗಳಿಗ ಅವಕಾಶ ನೀಡುವ ಕೆಲಸ ಮಾಡಿದ್ದರು. ಇದೇ ಸಂಸ್ಥೆ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣವಾಗುತ್ತಿದ್ದ ವೇಳೆ ಪುನೀತ್‌ ನಿಧನರಾದರು. ಇದೀಗ‘ಗಂಧದ ಗುಡಿ’ ಸಾಕ್ಷ್ಯ ಚಿತ್ರದ ಎಲ್ಲ ಕೆಲಸಗಳು ಮುಕ್ತಾಯವಾಗಿ ಬಿಡುಗಡೆ ಸಿದ್ಧವಾಗಿದೆ.

ಸಾಕ್ಷ್ಯಚಿತ್ರದ ತಂಡದವರು ಗಣೇಶ ಚತುರ್ಥಿ ಅಂಗವಾಗಿ ‘ಗಂಧದ ಗುಡಿ’ಯ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಇದರಲ್ಲಿ ಪುನೀತ್ ಅವರು ಆನೆಯ ಜತೆ ನಿಂತಿದ್ದಾರೆ. ಈ ಪೋಸ್ಟರ್‌ ಜೊತೆ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು ಎಂದು ಚಿತ್ರತಂಡ ಪೋಸ್ಟರ್‌ನಲ್ಲಿ ಬರೆದಿದೆ.

2021ರ ಅಕ್ಟೋಬರ್ 29ರಂದು ಅಪ್ಪು ನಿಧನರಾದರು. ಈ ಕಾರಣಕ್ಕೆ ‘ಗಂಧದ ಗುಡಿ’ಡಾಕ್ಯುಮೆಂಟರಿಯನ್ನು ಅಕ್ಟೋಬರ್ 28 ರಂದುಬಿಡುಗಡೆ ಮಾಡಲಾಗುತ್ತಿದೆ. ವಿಶೇಷ ಎಂದರೆ ಇದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕಾಗಿ ಅಭಿಮಾನಿಗಳು ಕಾತರರಾಗಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT