ಇತ್ತೀಚೆಗೆ ತೆರೆಕಂಡ ಗಣೇಶ್ ನಟನೆಯ ‘ಬೃಂದಾವಿಹಾರಿ’ ಸಿನಿಮಾದ ‘ಹೇ ರಾಮ ರಾಮ’ ಹಾಡು ಯುಟ್ಯೂಬ್ನಲ್ಲಿ 10ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

‘ಕೃಷ್ಣಂ ಪ್ರಣಯ ಸಖಿ’ ಖ್ಯಾತಿಯ ಶ್ರೀನಿವಾಸರಾಜು ನಿರ್ದೇಶನದ ಈ ಸಿನಿಮಾದ ಎಲ್ಲಾ ಹಾಡುಗಳಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಿದ್ದಾರೆ. ಅನುರಾಗ್ ಕುಲಕರ್ಣಿ ಹಾಡಿರುವ ಹಾಡಿಗೆ ಶೇಖರ್ ಮಾಸ್ಟರ್ ನೃತ್ಯ ನಿರ್ದೇಶಿಸಿದ್ದಾರೆ. ವಿ.ನಾಗೇಂದ್ರ ಪ್ರಸಾದ್ ಹಾಗೂ ಶೇಖರ್ ಮಾಸ್ಟರ್ ಕಾಂಬಿನೇಷನ್ನಲ್ಲೇ ‘ದ್ವಾಪರ’ ಹಾಡು ಹಿಟ್ ಆಗಿತ್ತು. ಈ ಹಾಡಿನ ಹುಕ್ಸ್ಟೆಪ್ ಕೂಡಾ ಆಕರ್ಷಕವಾಗಿ ಮೂಡಿಬಂದಿದೆ. ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರವನ್ನು ಸಮೃದ್ಧಿ ವಿ. ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ಶ್ರೀನಿವಾಸರಾಜು ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಗಣೇಶ್ಗೆ ಜೋಡಿಯಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.