ಮುಂಬೈ: ಪತಿ ರಾಜ್ ಕುಂದ್ರಾ ಅವರ ಗೈರು ಹಾಜರಿಯಲ್ಲಿ ಮಕ್ಕಳೊಂದಿಗೆ ನಟಿ ಶಿಲ್ಪಾ ಶೆಟ್ಟಿ ಗಣೇಶ ಹಬ್ಬವನ್ನು ಉತ್ಸಾಹದಿಂದಲೇ ಆಚರಿಸಿದ್ದಾರೆ.
ತಮ್ಮ ನಿವಾಸದಲ್ಲಿ ಇರಿಸಲಾಗಿರುವ ಗಣೇಶ ಮೂರ್ತಿಯ ಮುಂದೆ ಕುಳಿತು ಮಗ ಮತ್ತು ಮಗಳಿಗೆ ಸಿಹಿ ತಿನಿಸುತ್ತಿರುವ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ.
ತಮ್ಮ ಉಡುಪುಗಳನ್ನೇ ಹೋಲುವ ಉಡುಪನ್ನು ಮಗಳಿಗೂ ತೊಡಿಸಿರುವ ಶಿಲ್ಪಾ ಶೆಟ್ಟಿ ನಗುತ್ತಲೇ ಮಕ್ಕಳಿಗೆ ಸಿಹಿ ತಿನಿಸುತ್ತಿದ್ದಾರೆ.
ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಹೇಳಿದ್ದಾರೆ.
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಶಿಲ್ಪಾ ಶೆಟ್ಟಿ ಅವರನ್ನು ವಿವಾಹವಾಗುವುದಕ್ಕೂ ಮುಂಚೆ ರಾಜ್ ಕುಂದ್ರಾ ಕವಿತಾರನ್ನು ಮದುವೆಯಾಗಿ ಲಂಡನ್‌ನಲ್ಲಿ ನೆಲೆಸಿದ್ದರು. ಕವಿತಾಗೆ 2006ರಲ್ಲಿ ವಿಚ್ಛೇದನ ನೀಡಿ 2009ರಲ್ಲಿ ಶಿಲ್ಪಾ ಶೆಟ್ಟಿಯನ್ನು ಮದುವೆಯಾದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.