‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಯಶಸ್ಸಿನ ಬೆನ್ನಲ್ಲೇ ನಟ ಗಣೇಶ್ ಎರಡು ಪ್ರಾಜೆಕ್ಟ್ಗಳನ್ನು ಕೈಗೆತ್ತಿಕೊಂಡಿದ್ದರು. ನೃತ್ಯ ನಿರ್ದೇಶಕ ಧನಂಜಯ ನಿರ್ದೇಶನದ ‘ಪಿನಾಕ’ ಹಾಗೂ ಗೀತ ಸಾಹಿತಿ ಅರಸು ಅಂತಾರೆ ನಿರ್ದೇಶನದ ಸಿನಿಮಾಗಳು.

ಈ ಪೈಕಿ ಅರಸು ಅಂತಾರೆ ನಿರ್ದೇಶನದ ಚಿತ್ರದ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದೆ. ಈ ಸಿನಿಮಾದ ಶೀರ್ಷಿಕೆ ಇನ್ನಷ್ಟೇ ಘೋಷಣೆಯಾಗಬೇಕಿದೆ. ಎಸ್.ಎನ್.ಟಿ. ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್.ಸಿ.ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ ಈ ಸಿನಿಮಾದ ಮುಹೂರ್ತ ಕಳೆದ ತಿಂಗಳು ನಡೆದಿತ್ತು. ಬೆಂಗಳೂರಿನಲ್ಲೇ ಮೊದಲ ಹಂತದ ಚಿತ್ರೀಕರಣ ನಡೆದಿದೆ. ‘ನಾಯಕ ಗಣೇಶ್, ನಾಯಕಿ ಅಮೃತ ಅಯ್ಯರ್, ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಚ್ ಸುಧಿ, ಅರುಣ ಬಾಲರಾಜ್ ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ’ ಎಂದು ನಿರ್ಮಾಪಕ ರವಿ ಭದ್ರಾವತಿ ತಿಳಿಸಿದ್ದಾರೆ. ಚಿತ್ರಕ್ಕೆ ಸುಜ್ಞಾನ್ ಛಾಯಾಚಿತ್ರಗ್ರಹಣ, ಅಕ್ಷಯ್ ಪಿ.ರಾವ್ ಸಂಕಲನವಿದೆ. ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಂಭಾಷಣೆ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.