ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Garadi Trailer: ಗರಡಿ ಟ್ರೈಲರ್‌ನಲ್ಲಿ ಮಿಂಚಿದ ನಟ ಸೂರ್ಯ

Published : 3 ನವೆಂಬರ್ 2023, 8:22 IST
Last Updated : 3 ನವೆಂಬರ್ 2023, 8:22 IST
ಫಾಲೋ ಮಾಡಿ
Comments

ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದ,  ಬಿ.ಸಿ.ಪಾಟೀಲ್ ನಿರ್ಮಾಣದ ‘ಗರಡಿ’ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದ್ದು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.

ರಾಣೆಬೆನ್ನೂರಿನ ಮುನ್ಸಿಪಲ್ ಗ್ರೌಂಡ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ನಟ ದರ್ಶನ್‌ ಟ್ರೈಲರ್‌ ಬಿಡುಗಡೆಗೊಳಿಸಿದರು. ಟ್ರೈಲರ್ ಗಮನಿಸಿದರೆ ನಟ ಸೂರ್ಯ ಅವರಿಗೆ ಹೆಚ್ಚು ಸ್ಪೇಸ್ ಸಿಕ್ಕಿದ್ದು, ಬಿಸಿ ಪಾಟೀಲ್ ಹಾಗೂ ದರ್ಶನ್ ಡೈಲಾಗ್‌ಗಳು ಮನಸೋರೆಗೊಂಡಿವೆ.

ದರ್ಶನ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಯೂ ನಟಿಸಿದ್ದು, ಈ ಚಿತ್ರದ ಮೂಲಕ ನಟ ಸೂರ್ಯ ನಾಯಕನಾಗಿ ಬೆಳ್ಳಿತೆರೆಗೆ ಹೆಜ್ಜೆ ಇಟ್ಟಿದ್ದಾರೆ.

ಇವರಿಗೆ ಸೋನಲ್‌ ಮೊಂತೆರೋ ಜೋಡಿಯಾಗಿದ್ದಾರೆ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದ್ದು, ಗರಡಿ ಸಿನಿಮಾ ಇದೇ ನ.10ರಂದು ಬಿಡುಗಡೆಯಾಗುತ್ತಿದೆ.

ಸೌಮ್ಯ ಫಿಲ್ಮ್ಸ್‌ ಹಾಗೂ ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ನಿರಂಜನ್ ಬಾಬು ಛಾಯಾಚಿತ್ರಗ್ರಹಣ ಹಾಗೂ ಸುರೇಶ್ ಅರಸ್ ಅವರ ಸಂಕಲನ ಚಿತ್ರಕ್ಕಿದೆ. ಬಿ.ಸಿ.ಪಾಟೀಲ್, ರವಿಶಂಕರ್, ಧರ್ಮಣ್ಣ, ಸುಜಯ್ ಬೇಲೂರ್, ರಾಘವೇಂದ್ರ, ಚೆಲುವರಾಜ್, ತೇಜಸ್ವಿನಿ ಪ್ರಕಾಶ್, ನಯನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ನಟಿ ನಿಶ್ವಿಕಾ ನಾಯ್ಡು ಚಿತ್ರದಲ್ಲಿ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT