ಶನಿವಾರ, ಡಿಸೆಂಬರ್ 4, 2021
23 °C

ಗರುಡ ಗಮನ ವೃಷಭ ವಾಹನ ಟ್ರೇಲರ್ ಅನಾವರಣ: ವಿಭಿನ್ನ ಪಾತ್ರದಲ್ಲಿ ರಾಜ್ ಶೆಟ್ಟಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ‘ಒಂದು ಮೊಟ್ಟೆಯ ಕಥೆ’ ಖ್ಯಾತಿಯ ರಾಜ್ ಬಿ. ಶೆಟ್ಟಿ ಕಥೆ-ನಿರ್ದೇಶನದ ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ನವೆಂಬರ್ 19ರಂದು ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ರಕ್ಷಿತ್ ಶೆಟ್ಟಿಯವರ ಪರಂವಃ ಸ್ಟುಡಿಯೋಸ್ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದು, ಕಾರ್ತಿಕ್ ಗೌಡ ಅವರ ಕೆಆರ್‌ಜಿ ಸ್ಟುಡಿಯೋಸ್ ಮೂಲಕ ಹಂಚಿಕೆ ಮಾಡಲಾಗುತ್ತದೆ.

ರಾಜ್ ಬಿ. ಶೆಟ್ಟಿ ಅವರ ಜತೆ ರಿಷಬ್ ಶೆಟ್ಟಿ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ.

ಮಿತುನ್ ಮುಕುಂದನ್ ಅವರ ಸಂಗೀತವಿದ್ದು, ರಕ್ಷಿತ್ ಶೆಟ್ಟಿ ಅವರು ಕೂಡ ಚಿತ್ರಕ್ಕೆ ಶುಭಹಾರೈಸಿ ಟ್ವೀಟ್ ಮಾಡಿದ್ದಾರೆ.

ರಾಜ್ ಬಿ. ಶೆಟ್ಟಿ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಆಧುನಿಕ ಮಂಗಳೂರಿನ ಸಾಂಸ್ಕೃತಿಕ ಹಾಗೂ ಕರಾವಳಿ ಹಿನ್ನೆಲೆಯಲ್ಲಿ ನಡೆಯುವ ಚಿತ್ರದ ಕಥೆಯಲ್ಲಿ ಹರಿ ಮತ್ತು ಶಿವ ಎಂಬ ಎರಡು ಪಾತ್ರಗಳ ಜೀವನ ಕಥೆಯಿದೆ. ಕರಾವಳಿಯ ಹುಲಿವೇಷ ಟ್ರೇಲರ್‌ನುದ್ದಕ್ಕೂ ಕಥೆಯೊಂದಿಗೇ ಸಾಗುತ್ತದೆ.

ಶಿವನ ಪಾತ್ರದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ಹರಿಯ ಪಾತ್ರದಲ್ಲಿ ರಿಷಬ್‌ ಶೆಟ್ಟಿ ನಟಿಸಿದ್ದಾರೆ. ಚಿತ್ರದಲ್ಲಿ ರಿಷಬ್‌ ಎರಡು ವಿಭಿನ್ನ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು,  ಟ್ರೇಲರ್‌ ಮೂಲಕವೇ ಚಿತ್ರಕಥೆಯು ಸಾಕಷ್ಟು ಕುತೂಹಲ ಕೆರಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು