ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಮೊದಲ ಸೀಸನ್‌ನಲ್ಲಿ ನಗೆಯ ಮಿಂಚು ಹರಿಸಿದ್ದ ಗೋವಿಂದೇಗೌಡ(ಜಿಜಿ) ಮತ್ತು ದಿವ್ಯಾ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ.
ಗೋವಿಂದೇಗೌಡ ಶಕುನಿಯಾಗಿ ಮತ್ತು ದಿವ್ಯಾ ನರ್ಸ್ ಪಾತ್ರಧಾರಿಯಾಗಿ ಕಾಮಿಡಿ ಕಿಲಾಡಿಗಳ ವೇದಿಕೆ ಪ್ರವೇಶಿಸಿದ್ದರು. ಈಗಾಗಲೇ, ಈ ಇಬ್ಬರು ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇದೇ 27ರಂದು ಬೆಂಗಳೂರಿನ ನಾಗರಬಾವಿಯಲ್ಲಿ ನಿಶ್ಚಿತಾರ್ಥ ನಡೆಯಲಿದೆ. ಮಾರ್ಚ್ 14ರಂದು ಶೃಂಗೇರಿಯಲ್ಲಿ ಮದುವೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ದೇಶದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಕೆಜಿಎಫ್’ ಚಿತ್ರದಲ್ಲೂ ಗೋವಿಂದೇಗೌಡ ನಟಿಸಿದ್ದಾರೆ. ದಿವ್ಯಾ ಸದ್ಯಕ್ಕೆ ‘ಪುಣ್ಯಾತ್‌ಗಿತ್ತೀರು’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.