ಕನ್ನಡದ ಬಿಗ್ಬಾಸ್ 12ನೇ ಆವೃತ್ತಿಯಲ್ಲಿ ಮನರಂಜನೆ ನೀಡುತ್ತಿರುವ ಗಿಲ್ಲಿ ನಟ ಅಭಿನಯಿಸಿರುವ ‘ಸೂಪರ್ ಹಿಟ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಬಿಗ್ಬಾಸ್ ಮನೆಯಲ್ಲಿ ಎಲ್ಲರ ಕಾಲೆಳೆಯುತ್ತಾ, ಕಾಮಿಡಿ ಮಾಡುತ್ತಾ ವೀಕ್ಷಕರನ್ನು ರಂಜಿಸುತ್ತಿರುವ ಗಿಲ್ಲಿ ನಟ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇದರ ಮಧ್ಯೆ ಅವರು ನಾಯಕನಾಗಿ ಅಭಿನಯಿಸಿರುವ ಸೂಪರ್ ಹಿಟ್ ಸಿನಿಮಾ ಈಗ ಬಿಡುಗಡೆಗೆ ತಯಾರಾಗಿದೆ.
.BBK12: ಅತಿಥಿಗಳ ಕೆಂಗಣ್ಣಿಗೆ ಗುರಿಯಾದ ಗಿಲ್ಲಿ ನಟ; ಉಗ್ರಂ ಮಂಜು ಕೆಂಡಾಮಂಡಲ.ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ vs ರಘು: ದೂರ ಆಗ್ತಾರ ದೋಸ್ತಿಗಳು?.
ವಿಜಯಾನಂದ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಚಿತ್ರತಂಡ, ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. `ಸೂಪರ್ ಹಿಟ್' ಟೀಸರ್ ಸು ಫ್ರಂ ಸೋ ಸಿನಿಮಾದ ಬಳಿಕ ಮತ್ತೊಂದು ಮಟ್ಟದ ಕಾಮಿಡಿಯ ಮೂಲಕ ಸಂಚಲನ ಸೃಷ್ಟಿಸುವ ಲಕ್ಷಣಗಳು ದಟ್ಟವಾಗಿ ಕಾಣಿಸುತ್ತಿವೆ.

ಇನ್ನು ಈಗಿನ ಯುವ ಸಮುದಾಯಕ್ಕೆ ಹತ್ತಿರಾಗಿರೋ ಕಥೆ ಹೊಂದಿರುವ `ಸೂಪರ್ ಹಿಟ್' ಸಿನಿಮಾದಲ್ಲಿ ಸೋಶಿಯಲ್ ಮೀಡಿಯಾ ಮೂಲಕ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಗೌರವ್ ಶೆಟ್ಟಿ ಮತ್ತು ಗಿಲ್ಲಿ ನಟ ನಾಯಕರಾಗಿ ನಟಿಸಿದ್ದಾರೆ. ಶ್ವೇತಾ ನಾಯಕಿಯಾಗಿ ಜೊತೆಯಾಗಿದ್ದಾರೆ.

ವಿಜಯಲಕ್ಷ್ಮಿ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಜಿ. ಉಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಇನ್ನುಳಿದಂತೆ, ಆರ್.ಡಿ ನಾಗಾರ್ಜುನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಮತ್ತು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡ್ರ್ಯಾಗನ್ ಮಂಜು, ಸಾಧು ಕೋಕಿಲ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು, ಸೋಮಶೇಖರ್, ವಂಶಿ, ಮಂಜಣ್ಣ, ಬಿ.ಎನ್ ಮಂಗಳ, ಅಶ್ವಿನಿ ರಾವ್, ಸ್ವಪ್ನ ಶೆಟ್ಟಿಗಾರ್, ಮಂಗಳೂರು ಮೀನನಾಥ ಮುಂತಾದವರ ತಾರಾಗಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.