ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ IFFI ನಲ್ಲಿ ಕಾಂತಾರ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ

54ನೇ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ
Published 29 ನವೆಂಬರ್ 2023, 3:28 IST
Last Updated 29 ನವೆಂಬರ್ 2023, 3:28 IST
ಅಕ್ಷರ ಗಾತ್ರ

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ದೂರಿಯಾಗಿ ಪ್ರಾರಂಭವಾಗಿತ್ತು. ಇದೀಗ ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.

ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ.

ಈ ಬಾರಿ ಅಂತರರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ 15 ಚಿತ್ರಗಳು ಕಣದಲ್ಲಿದ್ದವು. ಈ ಪೈಕಿ ಭಾರತದಿಂದ ‘ಕಾಂತಾರ’ ಸೇರಿದಂತೆ ಒಟ್ಟು ಮೂರು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಈ ವಿಭಾಗದಲ್ಲಿ "ಕಾಂತಾರ" ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಮತ್ತು 15 ಲಕ್ಷ ರೂ. ನಗದನ್ನು ಒಳಗೊಂಡಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ರಿಷಬ್ ಶೆಟ್ಟಿ, ‘ಕಳೆದ ವರ್ಷ ಗೋವಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಿತ್ರದ ಪ್ರಚಾರಕ್ಕಾಗಿ ಬಂದಿದ್ದೆವು. ಈ ಬಾರಿ ನಮ್ಮ ಚಿತ್ರ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಸ್ಪರ್ಧಿಸಿ, ತೀರ್ಪುಗಾರರ ವಿಶೇಷ ಪ್ರಶಸ್ತಿಯನ್ನು ಗೆದ್ದಿದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT