ಸೋಮವಾರ, ಮಾರ್ಚ್ 20, 2023
25 °C

RRR Wins Golden Globe: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಎಸ್.ಎಸ್. ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಚಿತ್ರದ ಜನಪ್ರಿಯ 'ನಾಟು ನಾಟು' ಹಾಡಿಗೆ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌ ಪ್ರಶಸ್ತಿ ಲಭಿಸಿದೆ.

ಇದರಂತೆ ಚಿತ್ರತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ. 

ಇದನ್ನೂ ಓದಿ: 

'ಇಂದೊಂದು ವಿಶೇಷವಾದ ಸಾಧನೆ' ಎಂದು ಇಡೀ ಚಿತ್ರತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. 

ಆರ್‌ಆರ್‌ಆರ್ ಸಿನಿಮಾದ 'ನಾಟು ನಾಟು' ಹಾಡು 2023ರ ಗೋಲ್ಡನ್‌ ಗ್ಲೋಬ್‌‌ 'ಬೆಸ್ಟ್‌ ಒರಿಜಿನಲ್‌ ಸಾಂಗ್‌' ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.  

ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ ಮಾಡಿದ ನಾಟು ನಾಟು ಹಾಡಿಗೆ ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗಂಜ್ ಕಂಠ ನೀಡಿದ್ದಾರೆ. 

ಆರ್‌ಆರ್‌ಆರ್ ಚಿತ್ರವು ಜಾಗತಿಕವಾಗಿ  ₹1,200 ಕೋಟಿಗೂ ಹೆಚ್ಚು ಮೊತ್ತವನ್ನು ಸಂಗ್ರಹಿಸಿತ್ತು. 

ಪ್ರಮುಖರ ಪ್ರತಿಕ್ರಿಯೆಗಳು: 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು