ಶೇಖರ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿನ ಹುಕ್ ಸ್ಟೆಪ್ ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ ಎರಡನೇ ಸ್ಥಾನದಲ್ಲಿದೆ ಎಂದಿದೆ ಚಿತ್ರತಂಡ. ಶ್ರೀನಿವಾಸರಾಜು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಆಗಸ್ಟ್ 15ರಂದು ತೆರೆಕಾಣುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದೆ. ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ದ್ವಾಪರ ದಾಟುತ’ ಎಂಬ ಹಾಡನ್ನು ‘ಸರಿಗಮಪ’ ಖ್ಯಾತಿಯ ಜಸ್ಕರಣ್ ಸಿಂಗ್ ಹಾಡಿದ್ದಾರೆ. ಹಾಡು ಒಂದು ಕೋಟಿ ವೀಕ್ಷಣೆ ಪಡೆದಿರುವುದನ್ನು ಜಸ್ಕರಣ್ ಅವರೂ ಸಂಭ್ರಮಿಸಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್‌ಟೇನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಿಸಿದ್ದಾರೆ. ‘ಕೃಷ್ಣಂ ಪ್ರಣಯ ಸಖಿ’ ಗಣೇಶ್ ಅವರ 41ನೇ ಸಿನಿಮಾವಾಗಿದ್ದು, ಗಣೇಶ್‌ಗೆ ಜೋಡಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.