ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 41ನೇ ಚಿತ್ರ ಸದ್ದಿಲ್ಲದೇ ಸೆಟ್ಟೇರಿದೆ. ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆಯ ಈ ಸಿನಿಮಾದ ಫಸ್ಟ್‌ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಿರ್ದೇಶಕ ಶ್ರೀನಿವಾಸರಾಜು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್‌ನಲ್ಲಿ ಚಿತ್ರೀಕರಣ ನಡೆಯಲಿದೆ ಎಂದಿದೆ ಚಿತ್ರತಂಡ. ತ್ರಿಶೂಲ್ ಎಂಟರ್‌ಟೇನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್, ಬೆನಕ ಗಿರಿ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.