ಭಾನುವಾರ, ಮೇ 16, 2021
22 °C

ಲವರ್‌ಬಾಯ್‌ ಆಗಿ ಕಾಣಿಸಿಕೊಳ್ಳುತ್ತಿದ್ದ ಗಣೇಶ್‌ ಈಗ ಅಂಧನ ಪಾತ್ರದಲ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಚೆಲ್ಲಾಟ ಚಿತ್ರದ ಮುಖಾಂತರ ನಾಯಕನಾಗಿ ಚಂದನವನಕ್ಕೆ ಕಾಲಿಟ್ಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಲವು ಹಿಟ್‌ ಚಿತ್ರಗಳನ್ನು ನೀಡಿದ್ದಾರೆ. ಬಹುತೇಕ ಚಿತ್ರಗಳಲ್ಲಿ ಲವರ್‌ಬಾಯ್‌ ಆಗಿ ಕಾಣಿಸಿಕೊಂಡಿದ್ದ ಗಣೇಶ್‌ ಅವರು, ಇದೇ ಮೊದಲ ಬಾರಿಗೆ ವಿಭಿನ್ನ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಕಜಕಿಸ್ತಾನದಲ್ಲಿ ಗಾಳಿಪಟ 2 ಚಿತ್ರದ ಚಿತ್ರೀಕರಣ ಮುಗಿಸಿಕೊಂಡು ಮರಳಿರುವ ಗಣೇಶ್‌, ಸಿಂಪಲ್‌ ಸುನಿ ನಿರ್ದೇಶನದ ‘ಸಖತ್‌’ ಸಿನಿಮಾದಲ್ಲಿ ತಮ್ಮ ಪಾತ್ರ ಹೇಗಿರುತ್ತದೆ ಎನ್ನುವುದನ್ನು ಟ್ವಿಟರ್‌ನಲ್ಲಿ ಬಹಿರಂಗಪಡಿಸಿದ್ದಾರೆ. ಅಂಧನ ಪಾತ್ರಕ್ಕೆ ಈ ಬಾರಿ ಅವರು ಬಣ್ಣ ಹಚ್ಚಿದ್ದು, ‘ನಾಯಕನಾಗಿ 15 ವರ್ಷಗಳಿಂದ ನಿಮ್ಮ ನೋಟಗಳಿಗೆ ಸೆರೆಯಾಗಿದ್ದೇನೆ. ಮೊದಲ ಬಾರಿಗೆ ನನ್ನ ನೋಟವನ್ನು ಕಟ್ಟಿಟ್ಟು ಕಾಣಿಸಿಕೊಳ್ಳುತ್ತಿದ್ದೇನೆ. ಮುಚ್ಚಿಟ್ಟ ಕಣ್ಗಳಿಗೆ. ಬಿಚ್ಚಿಟ್ಟ ಪ್ರೀತಿಯ ಬೆಳಕಚೆಲ್ಲಿ ಹಾರೈಸಿ..’ ಎಂಬ ಅಡಿಬರಹವುಳ್ಳ ಪೋಸ್ಟ್‌ ಅಪ್‌ಲೋಡ್‌ ಮಾಡಿದ್ದಾರೆ. ‘ಚಮಕ್‌’ ಚಿತ್ರದ ಬಳಿಕ ಸಿಂಪಲ್‌ ಸುನಿ ಹಾಗೂ ಗಣೇಶ್‌ ಕಾಂಬಿನೇಷನ್‌ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದೆ.

ಅಂಧನಾಗಿ ಕೋರ್ಟ್‌ನ ಕಟಕಟೆಯಲ್ಲಿ ನಿಂತಿರುವ ಫೋಟೊವನ್ನು ಗಣೇಶ್‌ ಅವರು ಅಪ್‌ಲೋಡ್‌ ಮಾಡಿದ್ದು, ಈಗಾಗಲೇ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಗಣೇಶ್‌ಗೆ ಜೋಡಿಯಾಗಿ ನಟಿ ನಿಶ್ವಿಕಾ ನಾಯ್ಡು ಅಭಿನಯಿಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು