ಕನ್ನಡದ ತಾರಾ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ತಮ್ಮ ಮುಂದಿನ ಚಿತ್ರದ ಟೈಟಲ್ ಅನ್ನು ಇಂದು (ಮಾರ್ಚ್18) ಘೋಷಿಸಿದ್ದಾರೆ.

ಇತ್ತೀಚಿಗೆ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸ್ ರಾಜು ಸಂಯೋಜನೆಯಲ್ಲಿ ಮೂಡಿ ಬಂದಿದ್ದ 'ಕೃಷ್ಣಂ ಪ್ರಣಯ ಸಖಿ' ಸಿನಿಮಾ ಯಶಸ್ಸು ಸಾಧಿಸಿತ್ತು. ಈ ಯಶಸ್ಸಿನ ಬೆನ್ನಲ್ಲೇ ಮತ್ತೆ ಈ ಜೋಡಿ ಒಂದಾಗಿ ಹೊಸ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಸಿನಿಮಾಗೆ 'ಬೃಂದಾವಿಹಾರಿ' ಎಂದು ಟೈಟಲ್ ಕೂಡ ಇಟ್ಟಿದ್ದಾರೆ.

ಸದ್ಯ ಬಿಡುಗಡೆಯಾಗಿರುವ ಪೋಸ್ಟರ್ನಲ್ಲಿ ಗಣೇಶ್ ಅವರು ಕೊಳಲು ಹಿಡಿದು ಪೋಸ್ ಕೊಟ್ಟಿದ್ದಾರೆ. ಈ ಚಿತ್ರಗಳನ್ನು ಗಣೇಶ್ ಅವರು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಿನಿಪ್ರಿಯರನ್ನು ಆಕರ್ಷಸುತ್ತಿವೆ. ಮಾತ್ರವಲ್ಲ, ಗಣೇಶ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದೊಂದು ಪ್ರೇಮ, ಪ್ರಣಯದ ಸಿನಿಮಾ ಎಂಬಂತೆ ಕಂಡುಬಂದಿದೆ.

ಸಿನಿಮಾದ ಪೋಸ್ಟರ್ ಜೊತೆಗೆ ಗಣೇಶ್ ಅವರು, 'ಸಮಸ್ತ ನಾಡಿನ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ನಮ್ಮ ಚಿತ್ರದ ಶೀರ್ಷಿಕೆ 'ಬೃಂದಾವಿಹಾರಿ'
ಹರಿಸಿ ಹಾರೈಸಿ' ಎಂದು ಬರೆದಿದ್ದಾರೆ.

'ಬೃಂದಾವಿಹಾರಿ' ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಇಬ್ಬರು ನಾಯಕಿಯರು ಇದ್ದಾರೆ. ಚಿತ್ರದಲ್ಲಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮಾ ನಟಿಸುತ್ತಿದ್ದಾರೆ. ವಕೀಲೆ, ಮಾಡಲ್ ಹಾಗೂ ನಟಿಯಾಗಿರುವ ಮಾಳವಿಕಾ ಶರ್ಮಾ ಅವರಿಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ. ತಮಿಳಿನಲ್ಲಿ 'ನೆಲಾ ಟಿಕೆಟ್' ಹಾಗೂ 'ಭೀಮಾ'ದಂತಹ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಿನಿಮಾಗೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.