ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ 41ನೇ ಚಿತ್ರ ‘ಕೃಷ್ಣ..’ ಇಟಲಿಯತ್ತ

Published 1 ಜನವರಿ 2024, 13:38 IST
Last Updated 1 ಜನವರಿ 2024, 13:38 IST
ಅಕ್ಷರ ಗಾತ್ರ

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ 41ನೇ ಚಿತ್ರ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಚಿತ್ರೀಕರಣ ಅಂತಿಮ ಹಂತ ತಲುಪಿದ್ದು, ಚಿತ್ರದ ಎರಡು ಹಾಡುಗಳ ಚಿತ್ರೀಕರಣಕ್ಕೆ ಚಿತ್ರತಂಡ ಇಟಲಿಗೆ ಪ್ರಯಾಣ ಬೆಳೆಸಲಿದೆ.

ಶ್ರೀನಿವಾಸರಾಜು ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ. ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ ಹಾಡುಗಳ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ. ಹಾಡುಗಳ ಚಿತ್ರೀಕರಣಕ್ಕಾಗಿ ಮೂವತ್ತು ಜನರ ತಂಡ ಇಟಲಿಗೆ ಪ್ರಯಾಣ ಬೆಳಸಲಿದೆ. ಹೊಸವರ್ಷದ ಶುಭಕೋರಿ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಈ ಮಾಹಿತಿ ನೀಡಿದೆ. ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಚಿತ್ರಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

ತ್ರಿಶೂಲ್ ಎಂಟರ್‌ಟೈನ್ಮೆಂಟ್‌ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT