ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಚಿನ್ನಮ್ಮ’ನ ಹಿಂದೆ ಬಿದ್ದ ಗೋಲ್ಡನ್‌ ಸ್ಟಾರ್‌ ಗಣಿ

Published 2 ಜುಲೈ 2024, 21:54 IST
Last Updated 2 ಜುಲೈ 2024, 21:54 IST
ಅಕ್ಷರ ಗಾತ್ರ

ಸ್ಯಾಂಡಲ್‌ವುಡ್‌ನ ಗೋಲ್ಡನ್‌ ಸ್ಟಾರ್‌ ನಟ ಗಣೇಶ್‌ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗುತ್ತಿದ್ದು, ಇತ್ತೀಚೆಗಷ್ಟೇ ಬಿಡುಗಡೆಗೊಂಡ ‘ಚಿನ್ನಮ್ಮ’ ಹಾಡು ಟ್ರೆಂಡಿಂಗ್‌ನಲ್ಲಿದೆ. 

ಕವಿರಾಜ್ ಅವರು ಬರೆದು ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ‘ಪ್ರಸ್ತುತ ಆಲ್ ಇಂಡಿಯಾ ‘ಯೂಟ್ಯೂಬ್ ಟ್ರೆಂಡಿಂಗ್’ ಪಟ್ಟಿಯಲ್ಲಿ ‘ಚಿನ್ನಮ್ಮ’ ಹಾಡು ಬಿಡುಗಡೆಯಾದ ನಾಲ್ಕು ದಿನಗಳಲ್ಲಿ 70 ಲಕ್ಷಕ್ಕೂ ಅಧಿಕ ವೀಕ್ಷಣೆಗೊಂಡು ಮೂರನೇ ಸ್ಥಾನದಲ್ಲಿದೆ’ ಎಂದು ಚಿತ್ರತಂಡ ತಿಳಿಸಿದೆ. 

ತ್ರಿಶೂಲ್ ಎಂಟರ್‌ಟೈನ್ಮೆಂಟ್‌ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಸಿನಿಮಾ ನಿರ್ಮಿಸಿದ್ದು, ಶ್ರೀನಿವಾಸರಾಜು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಈ ಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜಾ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT