ಶುಕ್ರವಾರ, ಮೇ 27, 2022
22 °C

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾ ಬಿಡುಗಡೆ ನ.26ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ, ಸಿಂಪಲ್‌ ಸುನಿ ನಿರ್ದೇಶನದ ‘ಸಖತ್‌’ ಚಿತ್ರದ ಬಿಡುಗಡೆಯನ್ನು ಚಿತ್ರತಂಡವು ನ.26ಕ್ಕೆ ಮುಂದೂಡಿದೆ. ನಟ ಪುನೀತ್ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದಾಗಿ ಕನ್ನಡ ಚಿತ್ರರಂಗ ದಿಗ್ಭ್ರಮೆಗೆ ಒಳಗಾಗಿದೆ. ಹೀಗಾಗಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಬದಲಿಸಿದೆ. ನವೆಂಬರ್ 12ರ ಬದಲು 26ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದಿದೆ ಚಿತ್ರತಂಡ. 

ಈಗಾಗಲೇ ಟೀಸರ್‌ ಹಾಗೂ ಹಾಡುಗಳ ಮೂಲಕ ‘ಸಖತ್‌’ ಸಖತ್ತಾಗಿ ಸದ್ದು ಮಾಡುತ್ತಿದೆ. ಸಿಂಪಲ್ ಸುನಿ, ಗಣೇಶ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, ಅಂಧನ‌ ಪಾತ್ರದಲ್ಲಿ ಗಣೇಶ್‌ ಲುಕ್.. ಸಿಂಪಲ್ ಸುನಿ ಡೈಲಾಗ್ ಕಿಕ್.. ಜೂಡಾ ಸ್ಯಾಂಡಿ ಸಂಗೀತ ಎಲ್ಲವೂ ಚಿತ್ರಪ್ರೇಮಿಗಳನ್ನು ಸೆಳೆದಿದೆ.

ರೊಮ್ಯಾಂಟಿಕ್ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥಾಹಂದರವನ್ನು ಚಿತ್ರ ಒಳಗೊಂಡಿದೆ. ಟಿ.ವಿ. ರಿಯಾಲಿಟಿ ಶೋ ಹಾಗೂ ಕೋರ್ಟ್ ಕೇಸ್ ಸುತ್ತ ಸಿನಿಮಾ ಕಥೆ ಹೆಣೆಯಲಾಗಿದೆ. ಗಣೇಶ್‌ ರಿಯಾಲಿಟಿ ಶೋ ಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಟಿ ನಿಶ್ವಿಕಾ ನಾಯ್ಡು ಹಾಗೂ ಸುರಭಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಧರ್ಮಣ್ಣ ಕಡೂರು ಸೇರಿದಂತೆ ಮುಂತಾದವರು ತಾರಾಗಣದಲ್ಲಿದ್ದಾರೆ. ಕೆವಿಎನ್ ಪ್ರೊಡಕ್ಷನ್‌ನಡಿ ತಯಾರಾಗಿರುವ ಈ ಚಿತ್ರಕ್ಕೆ ನಿಶಾ ವೆಂಕಟ್ ಕೋನಾಂಕಿ ಹಾಗೂ ಸುಪ್ರಿತ್ ಬಂಡವಾಳ ಹೂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು