ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡ್‌ ನ್ಯೂಸ್‌ ಸಿನಿಮಾಗೆ ಬ್ಯಾಡ್‌ ನ್ಯೂಸ್‌: ಪ್ರದರ್ಶನ ತಡೆಗೆ ಹೈಕೋರ್ಟ್‌ ಮೊರೆ

Last Updated 24 ಡಿಸೆಂಬರ್ 2019, 12:38 IST
ಅಕ್ಷರ ಗಾತ್ರ

ಬೆಂಗಳೂರು:ಅಕ್ಷಯ್ ಕುಮಾರ್ ಹಾಗೂ ಕರೀನಾ ಕಪೂರ್ ಅಭಿನಯದ ಗುಡ್ ನ್ಯೂಸ್ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ಗುಡ್‌ ನ್ಯೂಸ್‌ ಸಿನಿಮಾಗೆ ತಡೆನೀಡುವಂತೆ ಸಮೀಮ್ ರಝಾ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದುಮಂಗಳವಾರವೇ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.

ಡಿ.27ಕ್ಕೆ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.

ಕೃತಕ ಗರ್ಭಧಾರಣೆ ಚಿಕಿತ್ಸೆ ಚಿತ್ರದ ಕಥಾವಸ್ತುವಾಗಿದೆ. ಚಿತ್ರದ "ಇಂದಿರಾ ಐವಿಎಫ್" ಎಂಬ ಸಂಸ್ಥೆ ಹೊರತುಪಡಿಸಿ ಉಳಿದ ಸಂಸ್ಥೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎನ್ನುವ ಅರ್ಥ ಕೊಡುವಂತಿದೆ. ಇದರಿಂದ ಜನರಿಗೆ ಐವಿಎಫ್ ಚಿಕಿತ್ಸೆ ಬಗ್ಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT