ಮಂಗಳವಾರ, ಡಿಸೆಂಬರ್ 6, 2022
20 °C

‘ಗುಡ್‌ಬೈ’ಗೆ ಉತ್ತಮ ಪ್ರತಿಕ್ರಿಯೆ: ಮಗಳ ಪಾತ್ರದಲ್ಲಿ ಮಿಂಚಿದ ರಶ್ಮಿಕಾ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಇಂದು ಬಿಡುಗಡೆಯಾಗಿರುವ ಬಾಲಿವುಡ್‌ ಚಿತ್ರ ಗುಡ್‌ಬೈಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಲಿವುಡ್‌ನ ಬಿಗ್‌ಬಿ ಅಮಿತಾಭ್‌ ಬಚ್ಚನ್‌, ರಶ್ಮಿಕಾ ಮಂದಣ್ಣ ಅಭಿನಯದ ಚಿತ್ರ ಅತ್ಯಂತ ಭಾವುಕತೆಯಿಂದ ಕೂಡಿದೆ ಎಂದು ಹಲವರು ಟ್ವೀಟ್‌ ಮಾಡಿದ್ದಾರೆ. ಅಮಿತಾಭ್‌ ಬಚ್ಚನ್‌ ಪಾತ್ರ ಪ್ರೇಕ್ಷಕರನ್ನು ಆವರಿಸಿಕೊಂಡರೆ, ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಅತ್ಯುತ್ತಮ ನಟನೆಯಿಂದ ನೋಡುಗರ ಮನ ಗೆದ್ದಿದ್ದಾರೆ.

ಪ್ರೇಕ್ಷಕರ ಕಣ್ಣಲ್ಲಿ ನೀರು ತರಿಸುವ ಸಿನಿಮಾ, ಪಾಲಕರನ್ನು ಪ್ರೀತಿಸಲು ಪ್ರೇರೇಪಿಸುತ್ತದೆ. ಹಲವಾರು ಮಿಥ್ಯಗಳು, ಹಳೆ ಸಂಪ್ರದಾಯಗಳನ್ನು ದಾಟಿ ಸಮಾಜದಲ್ಲಿನ ವಾಸ್ತವವನ್ನು ಬಿಂಬಿಸುತ್ತದೆ. ಒಬ್ಬ ವ್ಯಕ್ತಿ ಹೇಗೆ ನಮ್ಮ ಬದುಕಿನಲ್ಲಿ ಸದಾ ಉಳಿದುಕೊಳ್ಳುತ್ತಾರೆ, ಮಿಕ್ಕೆಲ್ಲವೂ ಶೂನ್ಯವಾಗುತ್ತದೆ ಎಂಬುದನ್ನು ಚಿತ್ರ ಹೇಳುತ್ತದೆ.

ನಟಿ ನೀನಾ ಗುಪ್ತಾ ನಟನೆಗೆ ಕೂಡ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಪಾತ್ರ ಆಗೊಮ್ಮೆ, ಈಗೊಮ್ಮೆ ಬಂದು ಹೋದರೂ ಪ್ರೇಕ್ಷಕರ ಮನದಲ್ಲಿ ಉಳಿಯುತ್ತದೆ ಎನ್ನುತ್ತಿದ್ದಾರೆ ಅಭಿಮಾನಿಗಳು.

ಚಿತ್ರದ ಮೂಲಕ ಬಾಲಿವುಡ್‌ ಪ್ರವೇಶಿಸಿರುವ ರಶ್ಮಿಕಾ ಮಂದಣ್ಣ ನಟನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಪ್ರತಿ ಮನೆಯಲ್ಲಿಯೂ ಕಾಣಸಿಗುವ ಒಬ್ಬ ಮಗಳ ಪಾತ್ರವನ್ನು ರಶ್ಮಿಕಾ ಮಾಡಿದ್ದಾರೆ. ಸಿಟ್ಟು, ಪ್ರೀತಿ, ಹತಾಶೆ, ಖುಷಿಯಿಂದ ಕೂಡಿರುವ ಪಾತ್ರದಲ್ಲಿ ರಶ್ಮಿಕಾ ಅಕ್ಷರಶಃ ಮಿಂಚಿದ್ದಾರೆ. ವಿಕಾಸ್ ಬಹ್ಲ್ ಅವರ ನಿರ್ದೇಶನದ ಈ ಚಿತ್ರದಲ್ಲಿ ನೀನಾ ಗುಪ್ತಾ ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು