‘ಗೋವಿಂದ ಗೋವಿಂದ’ ಶ್ರೀಶೈಲೇಂದ್ರ ಪ್ರೊಡಕ್ಷನ್ಸ್, ಎಲ್.ಜಿ. ಕ್ರಿಯೇಷನ್ಸ್ ಹಾಗೂ ರವಿ ಗರಣಿ ಪ್ರೊಡಕ್ಷನ್ಸ್‌ನಡಿ ನಿರ್ಮಾಣವಾಗಿರುವ ಕಾಮಿಡಿ ಚಿತ್ರ. ಇದಕ್ಕೆ ಆ್ಯಕ್ಷನ್ ಕಟ್ ಹೇಳಿರುವುದು ತಿಲಕ್. ಇದು ಅವರ ನಿರ್ದೇಶನದ ಮೊದಲ ಚಿತ್ರವೂ ಹೌದು.

ಇತ್ತೀಚೆಗೆ ಈ ಸಿನಿಮಾ ವೀಕ್ಷಿಸಿದ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಯಾವುದೇ ಕಟ್ ಅಥವಾ ಬೀಪ್ ಇಲ್ಲದೆ ಸಿನಿಮಾಗೆ ‘ಯು’ ಪ್ರಮಾಣ ಪತ್ರ ನೀಡಿದೆ.

ವಿಜಯಪುರ, ಮಧುಗಿರಿ, ಚಿಂತಾಮಣಿ, ಬೆಂಗಳೂರಿನ ಸುತ್ತಮುತ್ತ 60ಕ್ಕೂ ಹೆಚ್ಚು ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಸುಮಂತ್ ಶೈಲೇಂದ್ರ ಈ ಚಿತ್ರದ ನಾಯಕಿ. ಭಾವನಾ ಮೆನನ್, ಕವಿತಾ ಗೌಡ, ರೂಪೇಶ್ ಶೆಟ್ಟಿ, ಅಚ್ಯುತ್ ಕುಮಾರ್, ಶೋಭರಾಜ್, ವಿ. ಮನೋಹರ್, ಪವನ್, ವಿಜಯ್ ಚೆಂಡೂರ್ ತಾರಾಗಣದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣವಿದೆ. ಸಿ. ರವಿಚಂದ್ರನ್ ಸಂಕಲನ ನಿರ್ವಹಿಸಿದ್ದಾರೆ. ಹಿತನ್ ಹಾಸನ್ ಸಂಗೀತ ಸಂಯೋಜಿಸಿದ್ದಾರೆ. ದೇವ್ ರಂಗಭೂಮಿ ಸಂಭಾಷಣೆ ಬರೆದಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ.

ಶೀಘ್ರವೇ, ಟೀಸರ್ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದ ಚಿತ್ರಮಂದಿರಗಳ ಪ್ರದರ್ಶನಕ್ಕೆ ಅನುಮತಿ ಸಿಕ್ಕಿದ ಬಳಿಕ ಕೋವಿಡ್–19 ಮಾರ್ಗಸೂಚಿ ಅನ್ವಯ ಸಿನಿಮಾ ಬಿಡುಗಡೆಗೆ ತೀರ್ಮಾನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.