ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಗಸ್ಟ್‌ 15ಕ್ಕೆ ‘ಗೌರಿ’ ತೆರೆಗೆ

Published 1 ಜುಲೈ 2024, 18:45 IST
Last Updated 1 ಜುಲೈ 2024, 18:45 IST
ಅಕ್ಷರ ಗಾತ್ರ

ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ನಟನೆಯ ‘ಗೌರಿ’ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. 

ಈ ಚಿತ್ರದ ಮೂಲಕ ಸಮರ್ಜಿತ್‌ ನಾಯಕನಾಗಿ ಚಂದನವನಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸಿದ್ದು, ಇತ್ತೀಚೆಗೆ ನಡೆದ ಅದ್ದೂರಿಯಾದ ಕಾರ್ಯಕ್ರಮದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಿಸಿತು. ‘ವರಮಹಾಲಕ್ಷ್ಮೀ, ಸ್ವಾತಂತ್ರ್ಯ ದಿನ, ರಕ್ಷಾ ಬಂಧನ ಹೀಗೆ ಸಾಲುಸಾಲು ರಜೆಗಳು ಆ ಸಮಯದಲ್ಲಿದೆ. ಹಾಗಾಗಿ ಆಗಸ್ಟ್ 15ರಂದು ಬಿಡುಗಡೆಗೆ ನಿರ್ಧರಿಸಿದ್ದೇವೆ. ಒಬ್ಬ ಪ್ರೇಕ್ಷಕನಾಗಿ ಸಿನಿಮಾ ನೋಡಿದಾಗ ನನಗೆ ಬಹಳ ಇಷ್ಟವಾಯಿತು’ ಎಂದರು ಇಂದ್ರಜಿತ್ ಲಂಕೇಶ್.

‘ಚಿತ್ರಕ್ಕೆ ಸಕಾರಾತ್ಮಕವಾದ ಪ್ರತಿಕ್ರಿಯೆ ಬಂದಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ’ ಎನ್ನುತ್ತಾರೆ ಸಮರ್ಜಿತ್ ಲಂಕೇಶ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT