‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಈ ಪದ ಸಾಮಾನ್ಯವಾಗಿ ಸನ್ನಿವೇಶ, ಸಂದರ್ಭಕ್ಕೆ ತಕ್ಕಂತೆ ಮಾತಿನ ನಡುವೆ ನಾಣ್ನುಡಿ ಅಥವಾ ಗಾದೆ ಮಾತು ಆಗಿ ಬಳಕೆಯಾಗುವುದನ್ನು ಕೇಳಿದ್ದೇವೆ.ಇದೇ ಟೈಟಲ್ ಹಿಡಿದುಕೊಂಡು‘ಬೆಲ್ ಬಾಟಮ್’ ಸಿನಿಮಾದ ‘ಸಗಣಿ ಪಿಂಟೋ’ ಖ್ಯಾತಿಯ ಸುಜಯ ಶಾಸ್ತ್ರೀ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಚಿತ್ರವನ್ನುನಿರ್ದೇಶಿಸುತ್ತಿದ್ದು, ಚಿತ್ರೀಕರಣ ಮುಗಿದಿದೆಯಂತೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಜೂನ್ ಮೊದಲ ವಾರದಲ್ಲಿ ಸಿನಿಮಾ ತೆರೆಗೆ ಬರಲಿದೆಯಂತೆ.

ಪಕ್ಕಾ ಕಾಮಿಡಿ ಪ್ರಧಾನ ಚಿತ್ರವಾಗಿರುವ ಈ ಸಿನಿಮಾಕ್ಕೆ ಹಿಟ್ ಚಿತ್ರಗಳನ್ನು ನೀಡಿದಚಮಕ್,ಅಯೋಗ್ಯ ಚಿತ್ರಗಳ ಖ್ಯಾತಿಯ ನಿರ್ಮಾಪಕ ಟಿ.ಆರ್.ಚಂದ್ರಶೇಖರ್ ಆರ್ಥಿಕ ಇಂಧನ ಒದಗಿಸಿದ್ದಾರೆ. ಮಣಿಕಂಠ ಕದ್ರಿ ಸಂಗೀತ ನೀಡಿದ್ದಾರೆ. ‘ಒಂದು ಮೊಟ್ಟೆ ಕಥೆ’ ಸಿನಿಮಾದ ನಾಯಕ ರಾಜ್ ಬಿ.ಶೆಟ್ಟಿ ಈ ಸಿನಿಮಾದಲ್ಲಿ ನಾಯಕನಾಗಿ ಮತ್ತು ಅವರಿಗೆ ಜೋಡಿಯಾಗಿ, ವಿದ್ಯಾ ವಿನಾಯಕ ಧಾರಾವಾಹಿಯ ಕವಿತಾಗೌಡ ನಾಯಕಿಯಾಗಿ ನಟಿಸಿದ್ದಾರೆ. ಭರಪೂರ ಕಾಮಿಡಿ ಇರುವ ಈ ಚಿತ್ರದಲ್ಲಿ ಸುಜಯ್ ಶಾಸ್ತ್ರಿಯೂ ಕೂಡ ಒಂದು ಪಾತ್ರದಲ್ಲಿ ನಟಿಸಿದ್ದಾರಂತೆ.

‘ಈವರೆಗೂ ನಾವು ಮಾಡಿರುವ ಸಿನಿಮಾಗಳಲ್ಲೇ ಇದು ಅತ್ಯಂತ ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾ ಇದು.ಮನರಂಜನೆ ಸಿನಿಮಾಕ್ಕೆ ಮತ್ತೊಂದು ಹೆಸರು ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ವಾಗಲೆಂದು ಬಂಡವಾಳ ಹೂಡಿದ್ದೇನೆ. ಸಿನಿಮಾ ಕೂಡ ಅಷ್ಟೇ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾ ಮಂದಿರಕ್ಕೆ ಹೋಗಿ ಕುಳಿತವರು ನಗದೆ ಇರಲು ಚಾನ್ಸೇ ಇಲ್ಲ’ ಎನ್ನುತ್ತಾರೆ ನಿರ್ಮಾಪಕ ಟಿ.ಆರ್.ಚಂದ್ರಶೇಖರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.