ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದೇಶ್‌ ಶೆಟ್ಟಿ ಹೊಸ ಪ್ರಾಜೆಕ್ಟ್‌ ‘ಗುಂಮ್ಟಿ’

Published 17 ಏಪ್ರಿಲ್ 2024, 19:54 IST
Last Updated 17 ಏಪ್ರಿಲ್ 2024, 19:54 IST
ಅಕ್ಷರ ಗಾತ್ರ

‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂದೇಶ್‌ ಶೆಟ್ಟಿ ತಮ್ಮ ಹೊಸ ಪ್ರಾಜೆಕ್ಟ್‌ ಘೋಷಿಸಿದ್ದಾರೆ. ಸಂದೇಶ್‌, ತಮ್ಮ ಮೂರನೇ ಸಿನಿಮಾಕ್ಕೆ ‘ಗುಂಮ್ಟಿ’ ಎಂದು ಹೆಸರಿಟ್ಟಿದ್ದು, ನಿರ್ದೇಶನದ ಜೊತೆಗೆ ನಾಯಕನಾಗಿಯೂ ಇಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

‘ಗುಂಮ್ಟಿ’ ಸಿನಿಮಾದಲ್ಲಿ ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯೊಂದು ತೆರೆಮೇಲೆ ಅನಾವರಣಗೊಳ್ಳಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ಸಿನಿಮಾ ಹೊಂದಿದೆ ಎಂದಿದೆ ಚಿತ್ರತಂಡ. ಉಡುಪಿ, ಕುಂದಾಪುರ, ಶಿರಸಿ, ಬೆಳಗಾವಿ, ಮಹಾರಾಷ್ಟ್ರದ ಸೊಲ್ಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 25ಕ್ಕೂ ಹೆಚ್ಚು ದಿನ ಚಿತ್ರತಂಡ ಚಿತ್ರೀಕರಣ ನಡೆಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ ನಿರತವಾಗಿದೆ. ಶೀಘ್ರದಲ್ಲೇ ಸಿನಿಮಾ ತೆರೆಗೆ ಬರಲಿದೆ. 

ಸಿನಿಮಾವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಿಸಿದ್ದು, ವೈಷ್ಣವಿ ನಾಡಿಗ್ ನಾಯಕಿಯಾಗಿ ನಟಿಸಿದ್ದಾರೆ. ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ ಮತ್ತಿತರರು ತಾರಾಬಳಗದಲ್ಲಿದ್ದಾರೆ. ಅನೀಶ್ ಡಿಸೋಜಾ ಛಾಯಾಚಿತ್ರಗ್ರಹಣ, ಮೋಹನ್ ಸಂಗೀತ ಚಿತ್ರಕ್ಕಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT