ಶನಿವಾರ, ಮಾರ್ಚ್ 6, 2021
28 °C

‘ಪುರುಷೋತ್ತಮ’ನಾಗಿ ಜಿಮ್ ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಖ್ಯಾತ ದೇಹದಾರ್ಢ್ಯಪಟು ಜಿಮ್‌ ರವಿ ಅವರು ಪೋಷಕ ಪಾತ್ರದಿಂದ ನಾಯಕ ನಟನಾಗಿ ಬಣ್ಣ ಹಚ್ಚುತ್ತಿದ್ದಾರೆ. ‘ಪುರುಷೋತ್ತಮ’ ಅವರು ಅಭಿನಯಿಸುತ್ತಿರುವ ಚಿತ್ರ. ಇದುವರೆಗೆ ಕನ್ನಡ, ತೆಲುಗು, ತಮಿಳು ಸೇರಿದಂತೆ 30ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡ ಅನುಭವ ಅವರದ್ದು. ಕನ್ನಡ ಚಿತ್ರರಂಗದಲ್ಲಿ ಅವರು ಜಿಮ್‌ ರವಿ ಎಂದೇ ಗುರುತಿಸಿಕೊಂಡಿದ್ದಾರೆ.

‘ಪುರುಷೋತ್ತಮ’ ರವೀಸ್‌ ಜಿಮ್‌ ಪ್ರೊಡಕ್ಷನ್‌ನಲ್ಲಿ ನಿರ್ಮಾಣ ಆಗುತ್ತಿರುವ ಚಿತ್ರ.‘ದಿಲ್ದಾರ್‌’ ಮತ್ತು ‘ನಾನು ನಮ್ಮುಡ್ಗಿ ಖರ್ಚ್‌ಗೊಂದು ಮಾಫಿಯ’ ಚಿತ್ರಗಳನ್ನು ನಿರ್ದೇಶಿಸಿರುವ ಅಮರ್‌ನಾಥ್ ಎಸ್.ವಿ. ಅವರು ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ.

ಬೆಂಗಳೂರು ಮತ್ತು ಮೈಸೂರು ಭಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ. ಆನಂದ್ ಪ್ರಿಯಾ, ಪ್ರಮೋದ್ ಮರವಂತೆ ಹಾಗೂ ನಿರ್ದೇಶಕರು ರಚಿಸಿರುವ ಸಾಹಿತ್ಯಕ್ಕೆ ಶ್ರೀಧರ್ ಸಂಭ್ರಮ್ ಸಂಗೀತ ಸಂಯೋಜಿಸುತ್ತಿದ್ದಾರೆ. ಛಾಯಾಗ್ರಹಣ ಕುಮಾರ್ ಎಂ., ಸಂಕಲನ ಅರ್ಜುನ್ ಕಿಟ್ಟು ಅವರದಾಗಿದೆ. ಫೆಬ್ರವರಿ 14ರಂದು ಮಹೂರ್ತ ನಡೆಯಲಿದೆ. ಖ್ಯಾತ ನಟರೊಬ್ಬರು ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು