ಬಾಲಿವುಡ್ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಸೊಹೈಲ್ ಕಠೂರಿಯಾ ಅವರ ಮದುವೆಯ ವಿಡಿಯೊ ಒಟಿಟಿ ವೇದಿಕೆಯಾದ ಡಿಸ್ನಿಪ್ಲಸ್ ಹಾಟ್‌ಸ್ಟಾರ್ ಪ್ರಸಾರವಾಗಲಿದೆ.

ಈ ಬಗ್ಗೆ ಹಾಟ್‌ಸ್ಟಾರ್ ಪೋಸ್ಟರ್ ಬಿಡುಗಡೆ ಮಾಡಿದೆ. ಇದಕ್ಕೆ ‘ಲವ್ ಶಾದಿ ಡ್ರಾಮಾ’ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ರಮದ ಪ್ರಸಾರ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಹಾಟ್‌ಸ್ಟಾರ್ ತಿಳಿಸಿದೆ.

ಕಳೆದ ವರ್ಷ ಡಿಸೆಂಬರ್ 4ರಂದು ಹನ್ಸಿಕಾ ಹಾಗೂ ಸೊಹೈಲ್ ಮದುವೆ ಆಗಿದ್ದರು. ಮದುವೆ ಶಾಸ್ತ್ರಗಳ ಚಿತ್ರಗಳನ್ನು ಹನ್ಸಿಕಾ ಹಂಚಿಕೊಂಡಿದ್ದರು. ಮುಂದಿನ ದಿನಗಳಲ್ಲಿ ಮದುವೆಯ ವಿಡಿಯೊ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿದೆ ಎಂದ ಹನ್ಸಿಕಾ ತಿಳಿಸಿದ್ದಾರೆ.

ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಹನ್ಸಿಕಾ, ಹೃತಿಕ್ ರೋಷನ್ ನಟನೆಯ ‘ಕೋಯಿ ಮಿಲ್ ಗಯಾ’ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿದ್ದರು. ನಂತರ ನಾಯಕಿಯಾಗಿ ಬಡ್ತಿ ಪಡೆದರು. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದಾರೆ.

ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜೊತೆ 'ಬಿಂದಾಸ್' ಚಿತ್ರದಲ್ಲಿ ನಟಿಸಿದ್ದಾರೆ.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ, ನಯನತಾರಾ-ವಿಘ್ನೇಶ್ ಶಿವನ್ ಮದುವೆ ವಿಡಿಯೊ ಒಟಿಟಿಯಲ್ಲಿ ಪ್ರಸಾರವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಕಾರಣಾಂತರಗಳಿಂದ ಈ ವಿಡಿಯೊಗಳು ಪ್ರಸಾರವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.