ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಿರಾಯ್‌’ನಲ್ಲಿ ತೇಜ್‌ ಅವತಾರ

Published 25 ಏಪ್ರಿಲ್ 2024, 17:21 IST
Last Updated 25 ಏಪ್ರಿಲ್ 2024, 17:21 IST
ಅಕ್ಷರ ಗಾತ್ರ

ತೆಲುಗಿನಲ್ಲಿ ‘ಹನುಮಾನ್‌’ ಚಿತ್ರದ ಮೂಲಕ ಮೋಡಿ ಮಾಡಿದ ನಟ ತೇಜ್‌ ಸಜ್ಜಾ ತಮ್ಮ ಹೊಸ ಪ್ರಾಜೆಕ್ಟ್‌ ಘೋಷಿಸಿದ್ದಾರೆ. 

‘ಕಾರ್ತಿಕೇಯ’, ‘ಕಾರ್ತಿಕೇಯ-2’, ‘ಧಮಾಕ’ ಸೇರಿದಂತೆ ಹಲವು ಹಿಟ್ ಚಿತ್ರಗಳ ಸಾರಥಿ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾಗೆ ‘ಮಿರಾಯ್‌’ ಎಂಬ ಶೀರ್ಷಿಕೆ ಇಡಲಾಗಿದೆ. ‘ಹನುಮಾನ್‌’ನಲ್ಲಿ ಸೂಪರ್ ಹೀರೊ ಆಗಿದ್ದ ತೇಜ್ ಈಗ ‘ಮಿರಾಯ್‌’ನಲ್ಲಿ ಸೂಪರ್ ಯೋಧನಾಗಿ ಕಾಣಿಸಿಕೊಳ್ಳಲಿದ್ದಾರೆ.

‘ಮಿರಾಯ್’ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯ ಕಥೆಗಳನ್ನು ಬಿಚ್ಚಿಡುವ ಕಥೆಯನ್ನು ಸಿನಿಮಾ ಹೊಂದಿದೆ ಎಂದಿದೆ ಚಿತ್ರತಂಡ. ಗೌರ ಹರಿ ಸಂಗೀತ ಚಿತ್ರಕ್ಕಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ. ವಿಶ್ವಪ್ರಸಾದ್ ‘ಮಿರಾಯ್’ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾವನ್ನು 2025ರ ಏಪ್ರಿಲ್ 18ರಂದು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT