ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30ನೇ ವಸಂತಕ್ಕೆ ಕಾಲಿಟ್ಟ ಅತಿಯಾ ಶೆಟ್ಟಿ: ಪ್ರಿಯತಮೆಗೆ ಶುಭಕೋರಿದ ಕೆ.ಎಲ್‌.ರಾಹುಲ್

Last Updated 5 ನವೆಂಬರ್ 2022, 11:47 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟಿ ಅತಿಯಾ ಶೆಟ್ಟಿ ಅವರಿಗೆ ಇಂದು (ಶನಿವಾರ) 30ನೇ ಹುಟ್ಟುಹಬ್ಬದ ಸಂಭ್ರಮ.

ಅತಿಯಾ ಶೆಟ್ಟಿ ಹುಟ್ಟುಹಬ್ಬದ ಅಂಗವಾಗಿ ಬಾಲಿವುಡ್ ನಟ ಸುನೀಲ್ ಶೆಟ್ಟಿ, ಕರ್ನಾಟಕ ಮೂಲದ ಟೀಮ್ ಇಂಡಿಯಾ ಆಟಗಾರ ಕೆ.ಎಲ್‌.ರಾಹುಲ್ ಸೇರಿದಂತೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಮಗಳ ಫೋಟೊ ಹಂಚಿಕೊಂಡಿರುವ ಬಾಲಿವುಡ್ ನಟ ಸುನೀಲ್ ಶೆಟ್ಟಿ, ‘ಜನ್ಮದಿನದ ಶುಭಾಶಯಗಳು ನನ್ನ ಜೀವ’ ಎಂದು ಬರೆದುಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಅತಿಯಾ ಶೆಟ್ಟಿ ಜೊತೆಗಿನ ಫೋಟೊವನ್ನು ಪೋಸ್ಟ್ ಮಾಡಿರುವ ಕೆ.ಎಲ್‌.ರಾಹುಲ್, ‘ನನ್ನ ಪ್ರಿಯತಮೆಗೆ ಜನ್ಮದಿನದ ಶುಭಾಶಯಗಳು. ನೀವು ಎಲ್ಲವನ್ನೂ ಸುಂದರಗೊಳಿಸುತ್ತೀರಿ’ ಎಂದು ಬರೆದುಕೊಂಡಿದ್ದಾರೆ.

ಕಳೆದ ಮೂರು –ನಾಲ್ಕು ವರ್ಷಗಳಿಂದ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವ ರಾಹುಲ್ –ಅತಿಯಾ ಶೆಟ್ಟಿ ಜೋಡಿ ಶೀಘ್ರವೇ ಮದುವೆ ಆಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ.

ಸದ್ಯ ರಾಹುಲ್, ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡುತ್ತಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT