ಭಾನುವಾರ, ಸೆಪ್ಟೆಂಬರ್ 19, 2021
24 °C

ಬಾಲಿವುಡ್‌ ನಟಿ ಕಾಜೊಲ್‌ಗೆ 47ನೇ ವರ್ಷದ ಜನ್ಮದಿನ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ಖ್ಯಾತ ನಟಿ ಕಾಜೊಲ್‌ 47ನೇ ವರ್ಷದ ಹುಟ್ಟುಹಬ್ಬವನ್ನು ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ನಟ ಹಾಗೂ ಪತಿ ಅಜಯ್‌ ದೇವಗನ್‌ ಜನ್ಮದಿನ ಶುಭಾಶಯಗಳನ್ನು ಕೋರಿದರು. ಕೋವಿಡ್‌ ಕಾರಣದಿಂದಾಗಿ ಅಜಯ್‌ ದೇವಗನ್‌ ಹಾಗೂ ಮಕ್ಕಳ ಸಮ್ಮುಖದಲ್ಲಿ ಕಾಜೊಲ್‌ ಸರಳವಾಗಿ ಜನ್ಮದಿನ ಆಚರಿಸಿಕೊಂಡರು. 

ನಾವು ಪರಸ್ಪರ ಒಪ್ಪಿ ಮದುವೆಯಾದವು, ಇದಕ್ಕೆ ನಮ್ಮ ಮನೆಯವರ ಸಮ್ಮತಿ ಕೂಡ ಇತ್ತು. ನಮ್ಮ 22 ವರ್ಷಗಳ ದಾಂಪತ್ಯ ಜೀವನ ಸುಖಮಯವಾಗಿದೆ ಎಂದು ಅಜಯ್‌ ದೇವಗನ್‌ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

47ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕಾಜೊಲ್‌ಗೆ ಅಭಿಮಾನಿಗಳು ಹಾಗೂ ಸಿನಿಮಾರಂಗದ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಸದ್ಯ ಕಾಜೊಲ್‌ ಯಾವುದೇ ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಶಾರೂಕ್‌ ಖಾನ್‌ ಅವರೊಂದಿಗೆ ನಟಿಸುವ ಸಾಧ್ಯತೆಗಳಿದ್ದು ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಬಾಲಿವುಡ್‌ ಮಂದಿ ಹೇಳುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು