ಮಂಗಳವಾರ, ಅಕ್ಟೋಬರ್ 27, 2020
27 °C

HBD ಕೀರ್ತಿ ಸುರೇಶ್‌: ‘ಸರ್ಕಾರು ವಾರಿ ಪಾಟ’ ಸೇರಿದ ಮಹಾನಟಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್‌ರವರ 28ನೇ ವರ್ಷದ ಜನ್ಮದಿನ ಇಂದು (ಅ.17). ಈ ಸಂಭ್ರಮದ ದಿನದಂದು ತೆಲುಗಿನ ಖ್ಯಾತ ನಟ ಮಹೇಶ್‌ ಬಾಬು ಕೀರ್ತಿಗೆ ಭರ್ಜರಿ ಉಡುಗೊರೆ ಕೊಟ್ಟಿದ್ದಾರೆ.

ಮಹೇಶ್‌ ಬಾಬು ಅಭಿನಯದ ಬಹು ನೀರಿಕ್ಷೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ತಂಡಕ್ಕೆ ಕೀರ್ತಿ ಸುರೇಶ್‌ ಸೇರ್ಪಡೆಯಾಗಿದ್ದಾರೆ. ಇದನ್ನು ಸ್ವತಹ ಮಹೇಶ್‌ ಬಾಬು ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಆ ಮೂಲಕ ಕೀರ್ತಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.

ನಿಮ್ಮ ಜೊತೆ ಕೆಲಸ ಮಾಡುವುದು ಸ್ಮರಣೀಯ ಎಂದು ಫ್ರೀನ್ಸ್‌ಗೆ ಕೀರ್ತಿ ಧನ್ಯವಾದ ಹೇಳಿದ್ದಾರೆ.

ಸರ್ಕಾರು ವಾರಿ ಪಾಟ’ ಸಿನಿಮಾಕ್ಕೆ ಗೀತಾ ಗೋವಿಂದಂ ಖ್ಯಾತಿಯ ಪರಶುರಾಮ್‌ ಅವರ ಚಿತ್ರಕಥೆ, ನಿರ್ದೇಶನವಿದೆ. ಈ ಸಿನಿಮಾವನ್ನು ಮೈತ್ರಿ ಮೂಮಿ ಮೇಕರ್ಸ್ ನಿರ್ಮಾಣ ಮಾಡುತ್ತಿದ್ದು, ಎಸ್ಎಸ್ ತಮನ್ ಸಂಗೀತ ನಿರ್ದೇಶನವಿದೆ.

ಮಹೇಶ್‌ ಬಾಬು ಅವರ 45ನೇ ವರ್ಷದ ಹುಟ್ಟುಹಬ್ಬದಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಶೂಟಿಂಗ್‌ ಆರಂಭವಾಗಲಿದೆ. ಭಾರತ ಮತ್ತು ವಿದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು